ಸಾರಾಂಶ
ಮಹಾರಾಷ್ಟ್ರದಲ್ಲಿ ಮಹಾ ವಿಕಾಸ ಅಘಾಡಿ ಮೈತ್ರಿಕೂಟ ಸೀಟು ಹಂಚಿಕೆ ಅಂತಿಮಗೊಳಿಸಿದೆ
ಮುಂಬೈ: ಲೋಕಸಭಾ ಚುನಾವಣೆ ಸಂಬಂಧ ಮಹಾರಾಷ್ಟ್ರದಲ್ಲಿ ಮಹಾ ವಿಕಾಸ ಅಘಾಡಿ ಮೈತ್ರಿಕೂಟ ಸೀಟು ಹಂಚಿಕೆ ಅಂತಿಮಗೊಳಿಸಿದೆ.
ಅದರನ್ವಯ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಗರಿಷ್ಠ 21 ಸ್ಥಾನ ಪಡೆದುಕೊಂಡಿದ್ದರೆ, ಕಾಂಗ್ರೆಸ್ 17 ಮತ್ತು ಶರದ್ ಪವಾರ್ ನೇತೃತ್ವದ ಎನ್‌ಸಿಪಿ 10 ಸ್ಥಾನ ಪಡೆದುಕೊಂಡಿದೆ. ಸಾಂಗ್ಲಿ ಮತ್ತು ಭಿವಾಂಡಿ ಕ್ಷೇತ್ರಕ್ಕಾಗಿನ ತನ್ನ ಬೇಡಿಕೆಯನ್ನು ಕಾಂಗ್ರೆಸ್ ಬಿಟ್ಟ ಬೆನ್ನಲ್ಲೇ ಈ ಘೋಷಣೆ ಹೊರಬಿದ್ದಿದೆ.
ಈ ಎರಡೂ ಕ್ಷೇತ್ರಗಳನ್ನು ಸೇನೆ ಮತ್ತು ಎನ್‌ಸಿಪಿಗೆ ಬಿಟ್ಟುಕೊಡಲಾಗಿದೆ. ರಾಜ್ಯದಲ್ಲಿ ಒಟ್ಟು 5 ಹಂತದಲ್ಲಿ ಚುನಾವಣೆ ನಿಗದಿಯಾಗಿದೆ.