ಸಾರಾಂಶ
ಕೋಲ್ಕತಾ, ಬದ್ಲಾಪುರದಲ್ಲಿ ನಡೆದ ಅತ್ಯಾಚಾರ ಪ್ರಕರಣಗಳು ದೇಶದಲ್ಲಿ ಸಂಚಲನ ಸೃಷ್ಟಿಸಿರುವ ಬೆನ್ನಲ್ಲಿಯೇ ಮಹಾರಾಷ್ಟ್ರದಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.
ಮುಂಬೈ: ಕೋಲ್ಕತಾ, ಬದ್ಲಾಪುರದಲ್ಲಿ ನಡೆದ ಅತ್ಯಾಚಾರ ಪ್ರಕರಣಗಳು ದೇಶದಲ್ಲಿ ಸಂಚಲನ ಸೃಷ್ಟಿಸಿರುವ ಬೆನ್ನಲ್ಲಿಯೇ ಮಹಾರಾಷ್ಟ್ರದಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿಯ ಮೇಲೆ ಆಟೋ ಚಾಲಕನೊಬ್ಬ ಅತ್ಯಾಚಾರ ಮಾಡಿರುವ ಘಟನೆ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಲ್ಲಿ ನಡೆದಿದೆ..ವಿದ್ಯಾರ್ಥಿನಿ ಆರೋಪಿಯ ಆಟೋದಲ್ಲಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಆರೋಪಿ, ಆಕೆಗೆ ಗೊತ್ತಾಗದಂತೆ ಮತ್ತಿನ ಅಂಶ ಬೆರೆಸಿದ್ದ ಕುಡಿಯುವ ನೀರು ಕೊಟ್ಟಿದ್ದಾನೆ. ಅದನ್ನು ಕುಡಿದ ಬಳಿಕ ಆಕೆ ಪ್ರಜ್ಞಾಹೀನ ಸ್ಥಿತಿ ತಲುಪಿದ್ದಾಳೆ. ನಂತರ ಚಾಲಕ ಆಕೆಯನ್ನು ನಿರ್ಜನ ಸ್ಥಳಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಘಟನೆ ಬಳಿಕ ವಿದ್ಯಾರ್ಥಿನಿ ತನ್ನ ಮನೆಯವರಿಗೆ ವಿಷಯ ತಿಳಿಸಿದ್ದು, ಸಂತ್ರಸ್ತೆ ಕುಟುಂಬ ನೀಡಿದ ದೂರಿನನ್ವಯ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ