ಸಾರಾಂಶ
ಮಹಾರಾಷ್ಟ್ರ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಈ ಮೂಲಕ ರಾಜ್ಯದ ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.
ಮುಂಬೈ: ಮಹಾರಾಷ್ಟ್ರ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಈ ಮೂಲಕ ರಾಜ್ಯದ ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.
64 ವರ್ಷ ಹಿಂದೆ ಈ ಹುದ್ದೆ ಸೃಷ್ಟಿಯಾಗಿತ್ತು. ಇದಾದ ನಂತರ ಒಬ್ಬ ಮಹಿಳೆಯೂ ಈ ಹುದ್ದೆ ಪಡೆದಿರಲಿಲ್ಲ.ಇದೀಗ ಮುಖ್ಯ ಕಾರ್ಯದರ್ಶಿಯಾಗಿ 1 ವರ್ಷ ಕಾಲ ಸೇವೆ ಸಲ್ಲಿಸಲಿದ್ದಾರೆ.
ಸುಜಾತಾ ಅವರು 1987ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದು, ಇವರ ಪತಿ ಮನೋಜ್ ಸೌನಿಕ್ ಸಹ ಮಹಾರಾಷ್ಟ್ರ ಮುಖ್ಯ ಕಾರ್ಯದರ್ಶಿಯಾಗಿದ್ದರು.ಈ ಉನ್ನತ ಹುದ್ದೆಗೆ ಏರುವ ಮೊದಲ ಸುಜಾತಾ, ಹಣಕಾಸು, ವಿಪತ್ತು ನಿರ್ವಹಣೆ, ಶಿಕ್ಷಣ, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಯಲ್ಲಿ ಮೂರು ದಶಕಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಈ ಮೊದಲ ನಿತಿನ್ ಕರೀರ್ ಅವರು ಚೀಫ್ ಸೆಕ್ರೆಟರಿಯಾಗಿದ್ದರು.