ಸಾರಾಂಶ
ಮಹಾರಾಷ್ಟ್ರದ ಪಶ್ಚಿಮ ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಇಲ್ಲಿನ ಸಾಂಗ್ಲಿ ಮತ್ತು ಕೊಲ್ಲಾಪುರ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಸೃಷ್ಟಿ ಆಗಿದೆ. ಇದನ್ನು ತಪ್ಪಿಸಲು ಆಲಮಟ್ಟಿ ಜಲಾಶಯದಿಂದ ಹೆಚ್ಚು ನೀರನ್ನು ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ಸರ್ಕಾರಕ್ಕೆ ಮಹಾರಾಷ್ಟ್ರ ಸರ್ಕಾರ ಮನವಿ ಮಾಡಿದೆ.
ಮುಂಬೈ: ಮಹಾರಾಷ್ಟ್ರದ ಪಶ್ಚಿಮ ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಇಲ್ಲಿನ ಸಾಂಗ್ಲಿ ಮತ್ತು ಕೊಲ್ಲಾಪುರ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಸೃಷ್ಟಿ ಆಗಿದೆ. ಇದನ್ನು ತಪ್ಪಿಸಲು ಆಲಮಟ್ಟಿ ಜಲಾಶಯದಿಂದ ಹೆಚ್ಚು ನೀರನ್ನು ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ಸರ್ಕಾರಕ್ಕೆ ಮಹಾರಾಷ್ಟ್ರ ಸರ್ಕಾರ ಮನವಿ ಮಾಡಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್, ‘ಆಲಮಟ್ಟಿ ಜಲಾಶಯದಿಂದ ಸದ್ಯ ಬಿಡಲಾಗುತ್ತಿರುವ 2.5 ಲಕ್ಷ ಕ್ಯೂಸೆಕ್ ನೀರಿನ ಪ್ರಮಾಣವನ್ನು 3 ಲಕ್ಷ ಕ್ಯೂಸೆಕ್‌ಗೆ ಹೆಚ್ಚಿಸಲು ಮಹಾರಾಷ್ಟ್ರ ಸರ್ಕಾರವು ಕರ್ನಾಟಕ ಸರ್ಕಾರದ ಬಳಿ ಕೇಳಿದೆ’ ಎಂದಿದ್ದಾರೆ. ‘
ಈಗಾಗಲೇ ಮಹಾರಾಷ್ಟ್ರದ ಕೊಯ್ನಾ ಅಣೆಕಟ್ಟು ಶೇ.75ರಷ್ಟು ಭರ್ತಿಯಾಗಿದ್ದು, ಕೊಯ್ನಾ ಡ್ಯಾಂನಿಂದ ನೀರನ್ನು ಬಿಡುಗಡೆ ಮಾಡಬೇಕು. ಇದರಿಂದ ಕೃಷ್ಣಾ ನದಿ ನೀರನ್ನು ಮಟ್ಟ ಹೆಚ್ಚುತ್ತದೆ. ಒಂದು ವೇಳೆ ಕರ್ನಾಟಕ ಸರ್ಕಾರ ನೀರು ಬಿಡುಗಡೆ ಪ್ರಮಾಣವನ್ನು ಹೆಚ್ಚಿಸದಿದ್ದರೆ, ಸಾಂಗ್ಲಿ ಮತ್ತು ಕೊಲ್ಲಾಪುರದ ಜನರು ಪ್ರವಾಹ ಪರಿಸ್ಥಿತಿ ಎದುರಿಸಬೇಕಾಗುತ್ತದೆ. ನಾಗರಿಕರು ತೊಂದರೆ ಎದುರಿಸಲಿದ್ದು, ಕೃಷಿ ಭೂಮಿಗಳು ನಾಶವಾಗಲಿವೆ’ ಎಂದು ಪವಾರ್ ಹೇಳಿದ್ದಾರೆ.