ಸಾರಾಂಶ
ನ.20ರಂದು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಏಕಹಂತದ ಚುನಾವಣೆ ಹಾಗೂ ಜಾರ್ಖಂಡ್ ವಿಧಾನಸಭೆ ಚುನಾವಣೆಯ 2ನೇ ಹಂತದ ಮತದಾನದ ಅಬ್ಬರದ ಬಹಿರಂಗ ಪ್ರಚಾರಕ್ಕೆ ಸೋಮವಾರ ಸಂಜೆ ತೆರೆ ಬಿತ್ತು.
ಮುಂಬೈ: ನ.20ರಂದು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಏಕಹಂತದ ಚುನಾವಣೆ ಹಾಗೂ ಜಾರ್ಖಂಡ್ ವಿಧಾನಸಭೆ ಚುನಾವಣೆಯ 2ನೇ ಹಂತದ ಮತದಾನದ ಅಬ್ಬರದ ಬಹಿರಂಗ ಪ್ರಚಾರಕ್ಕೆ ಸೋಮವಾರ ಸಂಜೆ ತೆರೆ ಬಿತ್ತು.ಮಹಾರಾಷ್ಟ್ರದಲ್ಲಿ 288 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಮಹಾಯುತಿ ಕೂಟ ಹಾಗೂ ವಿಪಕ್ಷ ಮಹಾ ವಿಕಾಸ ಅಘಾಡಿ ಕೂಟಗಳ ನಡುವೆ ಭಾರಿ ಹಣಾಹಣಿ ಇದೆ. 4,136 ಅಭ್ಯರ್ಥಿಗಳು ಕಣದಲ್ಲಿದ್ದಾರೆ,
ಇನ್ನು 81 ಕ್ಷೇತ್ರಗಳಿರುವ ಜಾರ್ಖಂಡ್ ವಿಧಾನಸಭೆ ಚುನಾವಣೆಯ 2ನೇ ಹಂತದಲ್ಲಿ 38 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಎಂಎಂ-ಕಾಂಗ್ರೆಸ್ ನಡುವೆ ಪೈಪೋಟಿ ಇದೆ. 2ನೇ ಹಂತದಲ್ಲಿ 528 ಅಭ್ಯರ್ಥಿಗಳಿದ್ದಾರೆ.ಬಿಜೆಪಿ ಹಾಗೂ ಮಿತ್ರರ ಪರ ಉಭಯ ರಾಜ್ಯಗಳಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅಬ್ಬರದ ಪ್ರಚಾರ ಮಾಡಿದರು. ಇನ್ನು ಕಾಂಗ್ರೆಸ್ ಪರ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಉದ್ಧವ ಠಾಕ್ರೆ, ಶರದ್ ಪವಾರ್, ಪ್ರಿಯಾಂಕಾ ವಾದ್ರಾ, ಕರ್ನಾಟಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಚಾರ ನಡೆಸಿದರು.