ಮೋದಿ ಹೇಳಿಕೆ ವಿರುದ್ಧ ಕಾಂಗ್ರೆಸ್‌ ಹೋರಾಟ

| Published : Apr 23 2024, 12:48 AM IST / Updated: Apr 23 2024, 07:45 AM IST

Mallikarjun Kharge

ಸಾರಾಂಶ

ಕಾಂಗ್ರೆಸ್‌ ಗೆದ್ದರೆ ನಿಮ್ಮ ಮಂಗಳಸೂತ್ರ ಕಿತ್ತು ಮುಸ್ಲಿಮರಿಗೆ ಕೊಡುತ್ತೆ ಎಂಬ ಪ್ರಧಾನಿ ನರೇಂದ್ರ ಮೋದಿ ಟೀಕೆ ವಿರುದ್ಧ ಕಾಂಗ್ರೆಸ್‌ ಬೃಹತ್‌ ಹೋರಾಟ ರೂಪಿಸಿದೆ.

ಕೊಚ್ಚಿ: ಕಾಂಗ್ರೆಸ್‌ ಗೆದ್ದರೆ ನಿಮ್ಮ ಮಂಗಳಸೂತ್ರ ಕಿತ್ತು ಮುಸ್ಲಿಮರಿಗೆ ಕೊಡುತ್ತೆ ಎಂಬ ಪ್ರಧಾನಿ ನರೇಂದ್ರ ಮೋದಿ ಟೀಕೆ ವಿರುದ್ಧ ಕಾಂಗ್ರೆಸ್‌ ಬೃಹತ್‌ ಹೋರಾಟ ರೂಪಿಸಿದೆ. ಪ್ರಧಾನಿ ಮೋದಿ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿರದ ವಿಚಾರಗಳ ಬಗ್ಗೆ ಮಾತನಾಡಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆಂದು ಎಂದು ಕಿಡಿಕಾರಿರುವ ಕಾಂಗ್ರೆಸ್‌ ಹೋರಾಟದ ಹಾದಿ ಹಿಡಿದಿದೆ.

ಇದರ ಭಾಗವಾಗಿ, ರಾಜಸ್ಥಾನದಲ್ಲಿ ನೀಡಿದ ಹೇಳಿಕೆ ಆಧರಿಸಿ ಪ್ರಧಾನಿ ಮೋದಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಅದು ಕೇಂದ್ರ ಚುನಾವಣಾ ಆಯೋಗಕ್ಕೆ ಸೋಮವಾರ ದೂರು ನೀಡಿದೆ.

 ಮತ್ತೊಂದೆಡೆ ಪ್ರಣಾಳಿಕೆಯಲ್ಲಿ ಇರುವ ವಾಸ್ತವ ಅಂಶಗಳ ಕುರಿತು ಮನವರಿಕೆ ಮಾಡಿಕೊಡುವ ಸಲುವಾಗಿ ಭೇಟಿಗೆ ಅವಕಾಶ ಕೊಡಿ ಎಂದು ಮೋದಿ ಬಳಿಕ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮಯ ಕೋರಿದ್ದಾರೆ. ಇನ್ನೊಂದೆಡೆ ಪಕ್ಷದ ನಾಯಕರು ಮತ್ತು ಪಕ್ಷದ ಅಭ್ಯರ್ಥಿಗಳು ಮೋದಿಗೆ ಪಕ್ಷದ ಚುನಾವಣಾ ಪ್ರಣಾಳಿಕೆ ಪ್ರತಿ ಕಳುಹಿಸಿಕೊಡಲು ನಿರ್ಧರಿಸಿದ್ದಾರೆ.