ಇಂಫಾಲ: ಈಶಾನ್ಯ ರಾಜ್ಯ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ನಡೆದಿದೆ. ಇಲ್ಲಿನ ಕಾಂಗ್‌ಪೋಕ್ಪಿ ಜಿಲ್ಲೆಯ ಮನೆಗೆ ಶಸ್ತ್ರಸಜ್ಜಿತ ದುಷ್ಕರ್ಮಿಗಳ ಗುಂಪೊಂದು ನುಗ್ಗಿ ಮೂವರನ್ನು ಹತ್ಯೆಗೈದಿದ್ದಾರೆ. ಮತ್ತೊಂದೆಡೆ ಗಲಭೆಯಲ್ಲಿ 7 ಮನೆಗಳು ಬೆಂಕಿಗಾಹುತಿಯಾಗಿವೆ.ಜಿಲ್ಲೆಯ ಲೊಯಿಬೋಲ್ ಖುಲ್ಲೆನ್ ಗ್ರಾಮದಲ್ಲಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ದುಷ್ಕರ್ಮಿಗಳು ಏಕಾಏಕಿ ಇಲ್ಲಿನ ನಾಗರಿಕರ ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ಈ ವೇಳೆ ಎರಡು ಕಡೆಯವರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಘಟನೆಯಿಂದ ಭಯಗೊಂಡು ಕೆಲವು ಗ್ರಾಮಸ್ಥರು ಜೀವ ಉಳಿಸಿಕೊಳ್ಳಲು ಕಾಡಿನಲ್ಲಿ ಅಡಗಿ ಕುಳಿತ ಪ್ರಸಂಗವೂ ನಡೆಯಿತು.
ಮಣಿಪುರದಲ್ಲಿ ಮತ್ತೆ ಹಿಂಸೆ: ಮನೆಗೆ ನುಗ್ಗಿ ಮೂವರ ಹತ್ಯೆ
ಈಶಾನ್ಯ ರಾಜ್ಯ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ನಡೆದಿದೆ. ಇಲ್ಲಿನ ಕಾಂಗ್‌ಪೋಕ್ಪಿ ಜಿಲ್ಲೆಯ ಮನೆಗೆ ಶಸ್ತ್ರಸಜ್ಜಿತ ದುಷ್ಕರ್ಮಿಗಳ ಗುಂಪೊಂದು ನುಗ್ಗಿ ಮೂವರನ್ನು ಹತ್ಯೆಗೈದಿದ್ದಾರೆ. ಮತ್ತೊಂದೆಡೆ ಗಲಭೆಯಲ್ಲಿ 7 ಮನೆಗಳು ಬೆಂಕಿಗಾಹುತಿಯಾಗಿವೆ.
Latest Videos
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.