ಸುಪ್ರೀಂಗೆ ಮೊದಲ ಬಾರಿ ಮಣಿಪುರ ಜಡ್ಜ್‌

| Published : Jul 12 2024, 01:40 AM IST / Updated: Jul 12 2024, 05:24 AM IST

ಸಾರಾಂಶ

ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಕೋಟೀಶ್ವರ್‌ ಸಿಂಗ್‌ ಮತ್ತು ಮದ್ರಾಸ್‌ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಆರ್‌.ಮಹದೇವನ್‌ ಅವರನ್ನು ಸುಪ್ರೀಂಕೋರ್ಟ್‌ನ ನ್ಯಾಯಾಧೀಶರಾಗಿ ನೇಮಕ ಮಾಡುವಂತೆ ಕೊಲಿಜಿಯಂ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ವದೆಹಲಿ: ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಕೋಟೀಶ್ವರ್‌ ಸಿಂಗ್‌ ಮತ್ತು ಮದ್ರಾಸ್‌ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಆರ್‌.ಮಹದೇವನ್‌ ಅವರನ್ನು ಸುಪ್ರೀಂಕೋರ್ಟ್‌ನ ನ್ಯಾಯಾಧೀಶರಾಗಿ ನೇಮಕ ಮಾಡುವಂತೆ ಕೊಲಿಜಿಯಂ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಒಂದು ವೇಳೆ ಕೇಂದ್ರ ಸರ್ಕಾರ ಈ ಶಿಫಾರಸು ಅಂಗೀಕರಿಸಿದರೆ ಇತಿಹಾಸದಲ್ಲೇ ಮೊದಲ ಬಾರಿಗೆ ಮಣಿಪುರ ಮೂಲದ ವ್ಯಕ್ತಿಯೊಬ್ಬರು ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳಾಗಿ ನೇಮಕ ಆದಂತೆ ಆಗಲಿದೆ. ನ್ಯಾ. ಕೋಟೀಶ್ವರ್‌ ಸಿಂಗ್‌ ಅವರು ಮಣಿಪುರ ಮೂಲದವರು.

ಸುಪ್ರೀಂಕೋರ್ಟ್‌ನಲ್ಲಿ ಒಟ್ಟು 34 ನ್ಯಾಯಾಧೀಶರ ನೇಮಕಕ್ಕೆ ಅವಕಾಶವಿದ್ದು, ಹಾಲಿ 32 ನ್ಯಾಯಾಧೀಶರು ಸೇವೆ ಸಲ್ಲಿಸುತ್ತಿದ್ದಾರೆ.