ಮರಾಠಿ ನೆಪದಲ್ಲಿ ಗೂಂಡಾಗಿರಿಗೆ ಅವಕಾಶ ಇಲ್ಲ : ಫಡ್ನವೀಸ್

| N/A | Published : Jul 05 2025, 12:18 AM IST / Updated: Jul 05 2025, 05:05 AM IST

Maharashtra CM Devendra Fadnavis

ಸಾರಾಂಶ

ಮಹಾರಾಷ್ಟ್ರದಲ್ಲಿ ಮರಾಠಿಯೇತರ ವ್ಯಾಪಾರಿಗಳ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ, ಮರಾಠಿ ಹೆಮ್ಮೆಯ ಹೆಸರಿನಲ್ಲಿ ನಡೆಸುವ ಗೂಂಡಾಗಿರಿಯನ್ನು ಸಹಿಸಲಾಗದು ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಎಚ್ಚರಿಸಿದ್ದಾರೆ.

ನವದೆಹಲಿ: ಮಹಾರಾಷ್ಟ್ರದಲ್ಲಿ ಮರಾಠಿಯೇತರ ವ್ಯಾಪಾರಿಗಳ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ, ಮರಾಠಿ ಹೆಮ್ಮೆಯ ಹೆಸರಿನಲ್ಲಿ ನಡೆಸುವ ಗೂಂಡಾಗಿರಿಯನ್ನು ಸಹಿಸಲಾಗದು ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಎಚ್ಚರಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ‘ನಮ್ಮ ಸ್ವಂತ ಭಾಷೆಯ ಬಗ್ಗೆ ಹೆಮ್ಮೆ ಪಡಬೇಕು. ಆದರೆ ಅದನ್ನು ನೆಪವಾಗಿ ಬಳಸಿಕೊಂಡು ಗೂಂಡಾಗಿರಿಯಲ್ಲಿ ತೊಡಗಿದರೆ, ಅದನ್ನು ಸಹಿಸಲಾಗುವುದಿಲ್ಲ. ಭಾಷೆಯ ಆಧಾರದ ಮೇಲೆ ಯಾರಾದರೂ ಗೂಂಡಾಗಿರಿಯಲ್ಲಿ ತೊಡಗಿದರೆ, ನಮ್ಮ ಸರ್ಕಾರ ಅವರನ್ನು ಬಿಡುವುದಿಲ್ಲ. ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

ಇತ್ತೀಚೆಗೆ ಹಿಂದಿ ಮಾತಾಡದ ಆಹಾರ ಮಳಿಗೆ ವ್ಯಾಪಾರಿಯ ಮೇಲೆ ಎಂಎನ್‌ಎಸ್ ಪಕ್ಷದ ಕಾರ್ಯಕರ್ತರು ಹಲ್ಲೆ ನಡೆಸಿದ್ದರು. ಶಿವಸೇನಾ (ಯುಬಿಟಿ) ನಾಯಕ ರಾಜನ್ ವಿಚಾರೆ ಹಿಂದಿಯೇತರ ವ್ಯಾಪಾರಿಗಳನ್ನು ಕಚೇರಿಗೆ ಕರೆಸಿ ದೌರ್ಜನ್ಯ ಎಸಗಿದ್ದರು.

Read more Articles on