ಸಾರಾಂಶ
ಬಿಹಾರ ಚುನಾವಣಾ ಅಖಾಡಕ್ಕೆ ಇಳಿಯಲು ಸಜ್ಜಾಗಿರುವ ಪ್ರಶಾಂತ್ ಕಿಶೋರ್ ಅವರ ಜನ ಸುರಾಜ್ ಪಕ್ಷ 51 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದೆ. ಈ ಪಟ್ಟಿಯಲ್ಲಿ ವೈದ್ಯರು, ವಕೀಲರು, ಮಾಜಿ ಸರ್ಕಾರಿ ಅಧಿಕಾರಿಗಳು, ನಿವೃತ್ತ ಪೊಲೀಸರಿಗೂ ಟಿಕೆಟ್ ನೀಡಲಾಗಿದೆ.
ಪಟನಾ: ಬಿಹಾರ ಚುನಾವಣಾ ಅಖಾಡಕ್ಕೆ ಇಳಿಯಲು ಸಜ್ಜಾಗಿರುವ ಪ್ರಶಾಂತ್ ಕಿಶೋರ್ ಅವರ ಜನ ಸುರಾಜ್ ಪಕ್ಷ 51 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದೆ. ಈ ಪಟ್ಟಿಯಲ್ಲಿ ವೈದ್ಯರು, ವಕೀಲರು, ಮಾಜಿ ಸರ್ಕಾರಿ ಅಧಿಕಾರಿಗಳು, ನಿವೃತ್ತ ಪೊಲೀಸರಿಗೂ ಟಿಕೆಟ್ ನೀಡಲಾಗಿದೆ. 243 ವಿಧಾನಸಭಾ ಕ್ಷೇತ್ರಗಳ ಪೈಕಿ 53 ಜನರ ಹೆಸರನ್ನು ಪ್ರಕಟಿಸಲಾಗಿದ್ದು, ಆ ಪೈಕಿ ಶೇ.16ರಷ್ಟು ಮುಸ್ಲಿಮರು ಮತ್ತು ಶೇ.17ರಷ್ಟು ಹಿಂದುಳಿದ ಸಮುದಾಯದವರಿಗೆ ಮೀಸಲಿಟ್ಟಿದೆ.
ಈ ಪಟ್ಟಿಯಲ್ಲಿ ಪ್ರಶಾಂತ್ ಕಿಶೋರ್ ಹೆಸರಿಲ್ಲದಿರುವುದರಿಂದ ಕುತೂಹಲ ಮೂಡಿಸಿದ. ಪ್ರಶಾಂತ್ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಕ್ಷೇತ್ರ ರಾಘೋಪುರ ಅಥವಾ ತವರು ಕ್ಷೇತ್ರ ಕಾರ್ಗಹರ್‌ನಿಂದ ಸ್ಪರ್ಧಿಸುವ ಸಾಧ್ಯತೆ ಹೆಚ್ಚಿದೆ.