ಸಾರಾಂಶ
ಮತದಾರರ ಗುರುತಿನ ಚೀಟಿಗೆ ಆಧಾರ್ ಕಾರ್ಡ್ ಜೋಡಣೆ ಕುರಿತು ಚರ್ಚಿಸುವ ನಿಟ್ಟಿನಲ್ಲಿ ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಮಹತ್ವದ ಸಭೆ ಆಯೋಜಿಸಿದೆ. ಮತದಾರರ ಪಟ್ಟಿ ತಯಾರಿಸುವಲ್ಲಿ ಭಾರೀ ಅಕ್ರಮ ನಡೆದಿದೆ ಎಂಬ ತೃಣಮೂಲ ಕಾಂಗ್ರೆಸ್, ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳ ಆರೋಪದ ನಡುವೆಯೇ ಸಭೆ ನಿರ್ಧಾರವಾಗಿದೆ.
ನವದೆಹಲಿ: ಮತದಾರರ ಗುರುತಿನ ಚೀಟಿಗೆ ಆಧಾರ್ ಕಾರ್ಡ್ ಜೋಡಣೆ ಕುರಿತು ಚರ್ಚಿಸುವ ನಿಟ್ಟಿನಲ್ಲಿ ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಮಹತ್ವದ ಸಭೆ ಆಯೋಜಿಸಿದೆ. ಮತದಾರರ ಪಟ್ಟಿ ತಯಾರಿಸುವಲ್ಲಿ ಭಾರೀ ಅಕ್ರಮ ನಡೆದಿದೆ ಎಂಬ ತೃಣಮೂಲ ಕಾಂಗ್ರೆಸ್, ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳ ಆರೋಪದ ನಡುವೆಯೇ ಸಭೆ ನಿರ್ಧಾರವಾಗಿದೆ.
ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ನೇತೃತ್ವದಲ್ಲಿ ಸಭೆ ನಡೆಯಲಿದೆ. ಗೃಹ ಇಲಾಖೆ ಕಾರ್ಯದರ್ಶಿ ಗೋವಿಂದ ಮೋಹನ್, ಶಾಸಕಾಂಗ ಇಲಾಖೆಯ ಕಾರ್ಯದರ್ಶಿ ರಾಜೀವ್ ಮಣಿ ಮತ್ತು ಯುಐಡಿಎಐ ಸಿಇಒ ಭುವನೇಶ್ ಕುಮಾರ್ ಮೊದಲಾದವರು ಸಭೆಯಲ್ಲಿ ಭಾಗವಹಿಸಲಿದ್ದಾರೆ.