2024ರ ಲೋಕಸಭಾ ಚುನಾವಣೆಯಲ್ಲಿ ಮೋದಿಗೆ ಸೋಲು ಕುರಿತ ಹೇಳಿಕೆಗೆ ಫೇಸ್‌ಬುಕ್‌ ಕ್ಷಮೆ

| Published : Jan 16 2025, 01:30 AM IST / Updated: Jan 16 2025, 12:33 PM IST

mark zuckerberg

ಸಾರಾಂಶ

2024ರ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಸರ್ಕಾರ ಅಧಿಕಾರ ಕಳೆದುಕೊಂಡಿತ್ತು ಎಂಬ ಫೇಸ್‌ಬುಕ್‌ ಸಂಸ್ಥಾಪಕ ಮಾರ್ಕ್‌ ಜುಕರ್‌ಬರ್ಗ್‌ ಹೇಳಿಕೆ ಕುರಿತು ಫೇಸ್‌ಬುಕ್‌ನ ಮಾತೃಸಂಸ್ಥೆ ಮೆಟಾ ಇಂಡಿಯಾ ಬುಧವಾರ ಕ್ಷಮೆ ಕೋರಿದೆ.

ನವದೆಹಲಿ: 2024ರ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಸರ್ಕಾರ ಅಧಿಕಾರ ಕಳೆದುಕೊಂಡಿತ್ತು ಎಂಬ ಫೇಸ್‌ಬುಕ್‌ ಸಂಸ್ಥಾಪಕ ಮಾರ್ಕ್‌ ಜುಕರ್‌ಬರ್ಗ್‌ ಹೇಳಿಕೆ ಕುರಿತು ಫೇಸ್‌ಬುಕ್‌ನ ಮಾತೃಸಂಸ್ಥೆ ಮೆಟಾ ಇಂಡಿಯಾ ಬುಧವಾರ ಕ್ಷಮೆ ಕೋರಿದೆ. ಇದು ಅಚಾತುರ್ಯದಿಂದ ಆದ ತಪ್ಪು ಎಂದು ಸಂಸ್ಥೆ ಸ್ಪಷ್ಟನೆ ನೀಡಿದೆ.

ಕೋವಿಡ್‌ ಬಳಿಕ 2024ರಲ್ಲಿ ಭಾರತದಲ್ಲೂ ಸೇರಿ ವಿಶ್ವದ ವಿವಿಧೆಡೆ ನಡೆದ ಚುನಾವಣೆಯಲ್ಲಿ ಬಹುತೇಕ ಆಡಳಿತಾರೂಢ ಸರ್ಕಾರಗಳು ಅಧಿಕಾರ ಕಳೆದುಕೊಂಡವು ಎಂದು ಜುಕರ್‌ಬರ್ಗ್‌ ಪಾಡ್‌ಕಾಸ್ಟ್‌ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದರು. ಇದಕ್ಕೆ ಭಾರತದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಇದೇ ವೇಳೆ ಸಂವಹನ ಮತ್ತು ಮಾಹಿತಿ ತಂತ್ರಜ್ಞಾನಕ್ಕೆ ಸಂಬಂಧಿಸಿದ ಸಂಸದೀಯ ಸಮಿತಿ ಮುಖ್ಯಸ್ಥರೂ ಆಗಿರುವ ಬಿಜೆಪಿ ಸಂಸದ ನಿಶಿಕಾಂತ್‌ ದುಬೆ ಕೂಡ ಝುಕರ್‌ಬರ್ಗ್‌ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ, ಇದಕ್ಕಾಗಿ ಮೆಟಾವನ್ನು ವಿಚಾರಣೆಗೆ ಕರೆಸುವುದಾಗಿಯೂ ಹೇಳಿದ್ದರು.

ಅದರ ಬೆನ್ನಲ್ಲೇ ಇದೀಗ ಮೆಟಾ ಕ್ಷಮೆ ಕೇಳಿದ್ದು, ಪ್ರಕರಣ ಇಲ್ಲಿಗೇ ಮುಕ್ತಾಯಗೊಳಿಸುವುದಾಗಿ ದುಬೆ ತಿಳಿಸಿದ್ದಾರೆ.