ಸಾರಾಂಶ
ನಟ ಮಿಥುನ್ ಚಕ್ರವರ್ತಿ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಅವರನ್ನು ಅಪೊಲೊ ಆಸ್ಪತ್ರೆಯ ಐಸಿಯುನಿಂದ ಶಿಫ್ಟ್ ಮಾಡಲಾಗಿದೆ.
ಕೊಲ್ಕತಾ: ಮೆದುಳಿನ ಸ್ಟ್ರೋಕ್‌ಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ಬಹುಭಾಷಾ ನಟ ಮಿಥುನ್ ಚಕ್ರವರ್ತಿ ಚೇತರಿಸಿಕೊಳ್ಳುತ್ತಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಬಂಗಾಳಿ ನಟಿ ದೇಬಶ್ರೀ ರಾಯ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ‘ಮಿಥುನ್ ಚಕ್ರವರ್ತಿ ಅವರನ್ನು ಐಸಿಯುನಿಂದ ವಾರ್ಡ್‌ಗೆ ಶಿಫ್ಟ್ ಮಾಡಲಾಗಿದೆ. ಕೆಲವೇ ದಿನಗಳಲ್ಲಿ ಅವರು ಮರಳಿ ಶೂಟಿಂಗ್‌ನಲ್ಲಿ ಭಾಗಿಯಾಗಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಿಥುನ್‌ಗೆ ತೀವ್ರ ಎದೆನೋವು ಕಾಣಿಸಿಕೊಂಡ ಪರಿಣಾಮ ಶನಿವಾರ ಬೆಳಗ್ಗೆ ಅವರನ್ನು ನಗರದ ಅಪೋಲೋ ಆಸ್ಪತ್ರೆಗೆ ಸೇರಿಸಲಾಗಿತ್ತು.
)
;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))