ಸಾರಾಂಶ
ಪೆಟ್ರೋಲ್, ಡೀಸೆಲ್ ಮತ್ತು ನೈಸರ್ಗಿಕ ಅನಿಲಗಳನ್ನು ಸರಕು ಸೇವಾ ತೆರಿಗೆ (ಜಿಎಸ್‌ಟಿ) ವ್ಯಾಪ್ತಿಗೆ ತರಲು ಪ್ರಯತ್ನಿಸಲಾಗುವುದು ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.
ನವದೆಹಲಿ: ಪೆಟ್ರೋಲ್, ಡೀಸೆಲ್ ಮತ್ತು ನೈಸರ್ಗಿಕ ಅನಿಲಗಳನ್ನು ಸರಕು ಸೇವಾ ತೆರಿಗೆ (ಜಿಎಸ್‌ಟಿ) ವ್ಯಾಪ್ತಿಗೆ ತರಲು ಪ್ರಯತ್ನಿಸಲಾಗುವುದು ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.
ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಹರ್ದೀಪ್, ‘ಪೆಟ್ರೋಲ್ ಮತ್ತು ಡೀಸೆಲ್‌ಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರಲು 2020ರಲ್ಲೇ ಪ್ರಸ್ತಾವ ಇಡಲಾಗಿತ್ತು. ಆದರೆ ಬಹುತೇಕ ರಾಜ್ಯಗಳ ಪ್ರಮುಖ ಆದಾಯ ಇವುಗಳ ಮೇಲೆ ಹೇರಲಾಗುವ ತೆರಿಗೆಯೇ ಆಗಿರುವುದರಿಂದ ಆಕ್ಷೇಪ ವ್ಯಕ್ತಪಡಿಸಿದ್ದವು. ಹಾಗಾಗಿ ಅದು ನನೆಗುದಿಗೆ ಬಿದ್ದಿತ್ತು. ಈಗ ಮತ್ತೊಮ್ಮೆ ಅದನ್ನು ಜಾರಿಗೆ ತರಲು ರಾಜ್ಯಗಳೊಂದಿಗೆ ಚರ್ಚಿಸಲಾಗುವುದು’ ಎಂದು ತಿಳಿಸಿದ್ದಾರೆ.ಸಚಿವರ ಹೇಳಿಕೆ ಬೆನ್ನಲ್ಲೇ ತೈಲ ಕಂಪನಿಗಳ ಷೇರುಗಳು ದಿಢೀರ್ ಏರಿಕೆ ಕಂಡಿವೆ.