ಸಾರಾಂಶ
ಹಾಸನ ಜಿಲ್ಲೆಯಲ್ಲಿ ಶುಕ್ರವಾರ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ನಡೆದ ದುರಂತದಲ್ಲಿ 10 ಮಂದಿ ಸಾವನ್ನಪ್ಪಿದ ದಾರುಣ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ನವದೆಹಲಿ: ಹಾಸನ ಜಿಲ್ಲೆಯಲ್ಲಿ ಶುಕ್ರವಾರ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ನಡೆದ ದುರಂತದಲ್ಲಿ 10 ಮಂದಿ ಸಾವನ್ನಪ್ಪಿದ ದಾರುಣ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಪ್ರಧಾನಿ, ‘ಕರ್ನಾಟಕದ ಹಾಸನದಲ್ಲಿ ನಡೆದ ಅಪಘಾತ ಹೃದಯ ವಿದ್ರಾವಕ. ಈ ದುರಂತದ ಸಮಯದಲ್ಲಿ ಮೃತರ ಕುಟುಂಬಸ್ಥರ ಪರವಾಗಿ ನಿಲ್ಲುತ್ತೇನೆ. ಗಾಯಗೊಂಡವರು ಬೇಗ ಚೇತರಿಸಿಕೊಳ್ಳಲಿ. ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಸ್ಥರಿಗೆ ತಲಾ ₹2 ಲಕ್ಷ ಪರಿಹಾರವನ್ನು ಮತ್ತು ಗಾಯಾಳುಗಳಿಗೆ ₹50 ಸಾವಿರ ನೀಡಲಾಗುವುದು’ ಎಂದು ಬರೆದುಕೊಂಡಿದ್ದಾರೆ.