ಸಾರಾಂಶ
ಮೂರನೇ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲಿರುವ ನರೇಂದ್ರ ಮೋದಿ ತಾವು ಎನ್‌ಡಿಎ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಆಯ್ಕೆ ಆದ ಬಳಿಕ ಎಲ್.ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರನ್ನು ಶುಕ್ರವಾರ ಭೇಟಿ ಮಾಡಿದರು.
ನವದೆಹಲಿ: ಮೂರನೇ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲಿರುವ ನರೇಂದ್ರ ಮೋದಿ ತಾವು ಎನ್‌ಡಿಎ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಆಯ್ಕೆ ಆದ ಬಳಿಕ ಎಲ್.ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರನ್ನು ಶುಕ್ರವಾರ ಭೇಟಿ ಮಾಡಿದರು.
ಇದೇ ವೇಳೆ, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನೂ ಭೇಟಿ ಮಾಡಿದರು.ಎನ್‌ಡಿಎ ನಾಯಕನಾಗಿ ಆಯ್ಕೆ ಆದ ನಂತರ ಅವರವರ ನಿವಾಸಗಳಿಗೇ ತೆರಳಿದ ಮೋದಿ ಹಿರಿಯ ನಾಯಕರ ಆಶೀರ್ವಾದ ಪಡೆದರ. ಬಳಿಕ ಮೋದಿ ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಳಿ ತೆರಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.