ಸಾರಾಂಶ
ಅಮೆರಿಕ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಅವರು ತಮ್ಮ ಭಾರತ ಮೂಲದ ಪತ್ನಿ ಉಷಾ ಜತೆ 4 ದಿನಗಳ ಭಾರತ ಪ್ರವಾಸ ಕೈಗೊಳ್ಳಲಿದ್ದು, ಸೋಮವಾರ ದಿಲ್ಲಿಗೆ ಆಗಮಿಸಲಿದ್ದಾರೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಜತೆ ಮಾತುಕತೆ ನಡೆಸಲಿದ್ದಾರೆ.
ನವದೆಹಲಿ: ಅಮೆರಿಕ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಅವರು ತಮ್ಮ ಭಾರತ ಮೂಲದ ಪತ್ನಿ ಉಷಾ ಜತೆ 4 ದಿನಗಳ ಭಾರತ ಪ್ರವಾಸ ಕೈಗೊಳ್ಳಲಿದ್ದು, ಸೋಮವಾರ ದಿಲ್ಲಿಗೆ ಆಗಮಿಸಲಿದ್ದಾರೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಜತೆ ಮಾತುಕತೆ ನಡೆಸಲಿದ್ದಾರೆ.
ಅಮೆರಿಕದೊಂದಿಗೆ ಭಾರತ ವ್ಯಾಪಾರ ಒಪ್ಪಂದದ ಮಾತುಕತೆಗೆ ಸಿದ್ಧತೆ ನಡೆಸುತ್ತಿರುವ ಹೊತ್ತಿನಲ್ಲೇ ಈ ಬೆಳವಣಿಗೆ ಮಹತ್ವ ಪಡೆದುಕೊಂಡಿದೆ.
ಸೋಮವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ಮಾತುಕತೆ ನಡೆಯಲಿದ್ದು, ಇದರಲ್ಲಿ ಅಮೆರಿಕದ 5 ಹಿರಿಯ ಅಧಿಕಾರಿಗಳು ಭಾಗವಹಿಸುವ ನಿರೀಕ್ಷೆಯಿದೆ. ಅಂತೆಯೇ, ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್, ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ, ಅಮೆರಿಕಕ್ಕೆ ಭಾರತದ ರಾಯಭಾರಿ ವಿನಯ್ ಮೋಹನ್ ಕ್ವಾತ್ರಾ ಕೂಡ ಭಾಗವಹಿಸಲಿದ್ದಾರೆ. ಬಳಿಕ ಭೋಜನ ಕೂಟವನ್ನೂ ಆಯೋಜಿಸಲಾಗಿದೆ.
ಬಳಿಕ ವ್ಯಾನ್ಸ್ ಅವರ ಪರಿವಾರ ಆಗ್ರಾ ಹಾಗೂ ಜೈಪುರಕ್ಕೆ ತೆರಳಲಿದೆ.