ಸಾರಾಂಶ
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಜೊತೆಗಿನ ಉತ್ತಮ ಒಡನಾಟ ಬಳಸಿಕೊಂಡು ಪ್ರಧಾನಿ ನರೇಂದ್ರ ಮೋದಿ ಅವರು ಮುಂಬರುವ ವಿಧಾನಸಭಾ ಚುನಾವಣೆಗಳಲ್ಲಿ ಇವಿಎಂ ಹ್ಯಾಕ್ ಮಾಡಬಹುದು ಎಂದು ಕಾಂಗ್ರೆಸ್ ನಾಯಕ ರಶೀದ್ ಅಲ್ವಿ ಆರೋಪಿಸಿದ್ದಾರೆ.
ನವದೆಹಲಿ: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಜೊತೆಗಿನ ಉತ್ತಮ ಒಡನಾಟ ಬಳಸಿಕೊಂಡು ಪ್ರಧಾನಿ ನರೇಂದ್ರ ಮೋದಿ ಅವರು ಮುಂಬರುವ ವಿಧಾನಸಭಾ ಚುನಾವಣೆಗಳಲ್ಲಿ ಇವಿಎಂ ಹ್ಯಾಕ್ ಮಾಡಬಹುದು ಎಂದು ಕಾಂಗ್ರೆಸ್ ನಾಯಕ ರಶೀದ್ ಅಲ್ವಿ ಆರೋಪಿಸಿದ್ದಾರೆ.
ಇದನ್ನು ಕೇಂದ್ರ ಚುನಾವಣಾ ಆಯೋಗ ಸ್ಪಷ್ಟವಾಗಿ ತಳ್ಳಿಹಾಕಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ‘ಪೇಜರ್‌ಗಳು ಅಂತರ್ಜಾಲಕ್ಕೆ ಸಂಪರ್ಕ ಹೊಂದಿರುತ್ತವೆ.
ಆದರೆ ಇವಿಎಂಗಳು ಹಾಗಿಲ್ಲ. ಜೊತೆಗೆ ಪೇಜರ್‌ಗಳಲ್ಲಿ ಬಳಸುವ ಬ್ಯಾಟರಿಗೂ, ಇವಿಎಂ ಬ್ಯಾಟರಿಗೂ ವ್ಯತ್ಯಾಸವಿದೆ. ಇವಿಎಂಗಳಲ್ಲಿ ಒಮ್ಮೆ ಮಾತ್ರ ಬಳಸಬಹುದಾದ ಕ್ಯಾಲ್ಕುಲೇಟರ್ ರೀತಿಯ ಬ್ಯಾಟರಿ ಬಳಸಲಾಗಿರುತ್ತದೆ. ಹೀಗಾಗಿ ಅದನ್ನು ಹ್ಯಾಕ್ ಮಾಡಲು ಸಾಧ್ಯವಿಲ್ಲ’ ಎಂದು ಸ್ಪಷ್ಟನೆ ನೀಡಿದ್ದಾರೆ.