ಸಾರಾಂಶ
ಮುಖ್ತಾರ್ ಅನ್ಸಾರಿಗೆ ನಕಲಿ ಗನ್ ಲೈಸೆನ್ಸ್ ಕೇಸಿನಲ್ಲಿ ಜೀವಾವಧಿ ಶಿಕ್ಷೆ ಪ್ರಕಟಿಸಿದೆ.
ವಾರಣಾಸಿ: ಉತ್ತರ ಪ್ರದೇಶದ ಮಾಜಿ ಶಾಸಕ, ಪಾತಕಿ ಮುಖ್ತರ್ ಅನ್ಸಾರಿಗೆ ನಕಲಿ ಗನ್ ಲೈಸೆನ್ಸ್ ಕೇಸಿನಲ್ಲಿ ಬುಧವಾರ ವಾರಣಾಸಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಅನ್ಸಾರಿ ವಿರುದ್ಧ 1990 ಡಿಸೆಂಬರ್‌ನಲ್ಲಿ ಗಾಜಿಪುರ ಜಿಲ್ಲೆಯ ಮೊಹಮ್ಮದಾಬಾದ್ ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆ ಅಡಿಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.2023ರಲ್ಲಿ ಅವಧೇಶ್ ರಾಯ್ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಯಾಗಿದ್ದ ಅನ್ಸಾರ್ ಪ್ರಸ್ತುತ ಬಂದಾ ಜೈಲಿನಲ್ಲಿದ್ದು, ಅಲ್ಲಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗಿದ್ದನು. ಈತನಿಗೆ ಇದುವರೆಗೂ ಕನಿಷ್ಠ ಏಳು ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದು, ಉತ್ತರ ಪ್ರದೇಶ, ಪಂಜಾಬ್, ನವದೆಹಲಿ ಮತ್ತು ಇತರ ರಾಜ್ಯಗಳಲ್ಲಿ ಸುಮಾರು 60 ಪ್ರಕರಣಗಳು ಬಾಕಿ ಇವೆ ಎಂದು ಪೊಲೀಸರು ತಿಳಿಸಿದ್ದಾರೆ.