ಸಾರಾಂಶ
ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ತಾಜ್ ಹೋಟೆಲ್‌ಗೆ ಬಾಂಬ್ ಸ್ಫೋಟಿಸುವ ಬೆದರಿಕೆ ಸಂದೇಶ ರವಾನೆಯಾಗಿದೆ.
ಮುಂಬೈ: ಇಲ್ಲಿನ ಪ್ರಸಿದ್ಧ ತಾಜ್ ಹೋಟೆಲ್ ಮತ್ತು ಛತ್ರಪತಿ ಶಿವಾಜಿ ಮಹಾರಾಜ್ ಅಂತಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆಯೆಂದು ಮುಂಬೈನ ಪೊಲೀಸ್ ನಿಯಂತ್ರಣ ಕೊಠಡಿಗೆ ಸೋಮವಾರ ಬೆದರಿಕೆ ಕರೆಯೊಂದು ಬಂದಿದೆ.
ಕರೆ ಬರುತ್ತಿದ್ದಂತೆ ತಕ್ಷಣ ಕಾರ್ಯಪ್ರವತ್ತರಾದ ಪೊಲೀಸರು, ತಾಜ್ ಹೋಟೆಲ್ ಮತ್ತು ವಿಮಾನ ನಿಲ್ದಾಣಕ್ಕೆ ಧಾವಿಸಿ ತಪಾಸಣೆಯನ್ನು ನಡೆಸಿದ್ದಾರೆ.
ಆದರೆ ಯಾವುದೇ ಅನುಮಾನಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ, ಉತ್ತರ ಪ್ರದೇಶ ಮೂಲದ ಮೊಬೈಲ್ ಸಂಖ್ಯೆಯಿಂದ ಈ ಬೆದರಿಕೆ ಕರೆ ಬಂದಿದೆ. ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.