ಸಾರಾಂಶ
ಭಾರತದ ಮೇಲೆ ಕೆಟ್ಟ ದೃಷ್ಟಿ ಬೀರುವವರಿಗೆ ಸೂಕ್ತ ಉತ್ತರ ನೀಡುವುದು ಮತ್ತು ಸಶಸ್ತ್ರ ಪಡೆಗಳೊಂದಿಗೆ ಕೆಲಸ ಮಾಡುವುದು ತಮ್ಮ ಜವಾಬ್ದಾರಿ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ನವದೆಹಲಿ: ಭಾರತದ ಮೇಲೆ ಕೆಟ್ಟ ದೃಷ್ಟಿ ಬೀರುವವರಿಗೆ ಸೂಕ್ತ ಉತ್ತರ ನೀಡುವುದು ಮತ್ತು ಸಶಸ್ತ್ರ ಪಡೆಗಳೊಂದಿಗೆ ಕೆಲಸ ಮಾಡುವುದು ತಮ್ಮ ಜವಾಬ್ದಾರಿ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಸಮಾರಂಭವೊದರಲ್ಲಿ ಮಾತನಾಡಿದ ಅವರು, ‘ರಕ್ಷಣಾ ಸಚಿವನಾಗಿ, ದೇಶದ ಗಡಿಗಳನ್ನು ರಕ್ಷಿಸುವುದು ಮತ್ತು ನಮ್ಮ ದೇಶದ ಮೇಲೆ ಕೆಟ್ಟ ದೃಷ್ಟಿ ಬೀರುವವರಿಗೆ ಸೂಕ್ತ ಉತ್ತರ ನೀಡುವುದು ನನ್ನ ಕರ್ತವ್ಯ. ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ, ಇದು ಖಂಡಿತವಾಗಿಯೂ ಸಂಭವಿಸುತ್ತದೆ ಎಂದು ನಾನು ಭರವಸೆ ನೀಡುತ್ತೇನೆ’ ಎಂದರು. ಈ ಮೂಲಕ ಶತ್ರುದೇಶ ಪಾಕಿಸ್ತಾನದ ವಿರುದ್ಧ ಪ್ರತೀಕಾರ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.