ಸಾರಾಂಶ
ನಾಗಾಲ್ಯಾಂಡ್‌ನ ರಾಜ್ಯಪಾಲರಾದ ಲಾ ಗಣೇಶನ್(80) ಅವರು ಅನಾರೋಗ್ಯದಿಂದಾಗಿ ಶುಕ್ರವಾರ ನಿಧನರಾಗಿದ್ದಾರೆ. ಅವರ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಕೊಹಿಮಾ: ನಾಗಾಲ್ಯಾಂಡ್‌ನ ರಾಜ್ಯಪಾಲರಾದ ಲಾ ಗಣೇಶನ್(80) ಅವರು ಅನಾರೋಗ್ಯದಿಂದಾಗಿ ಶುಕ್ರವಾರ ನಿಧನರಾಗಿದ್ದಾರೆ. ಅವರ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಆ.8ರಂದು ಚೆನ್ನೈನ ತಮ್ಮ ನಿವಾಸದಲ್ಲಿ ಬಿದ್ದು ತಲೆಗೆ ಪೆಟ್ಟು ಮಾಡಿಕೊಂಡಿದ್ದು, ಖಾಸಗಿ ಆಸ್ಪತ್ರೆಯೊಂದರಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಿಸದೆ ಇಹಲೋಕ ತ್ಯಜಿಸಿದ್ದಾರೆ.
ತಮಿಳುನಾಡಿನವರಾದ ಗಣೇಶನ್, 2023ರ ಫೆ.12ರಂದು ನಾಗಾಲ್ಯಾಂಡ್‌ನ ಗವರ್ನರ್ ಆಗಿ ನೇಮಕವಾಗಿದ್ದರು.