11ನೇ ಬಾರಿಗೆ ಕೆಂಪುಕೋಟೆಯಲ್ಲಿ ಧ್ವಜಾರೋಹಣ : ಮನಮೋಹನ್ ಸಿಂಗ್ ದಾಖಲೆ ಮುರಿದ ಪ್ರಧಾನಿ ನರೇಂದ್ರ ಮೋದಿ

| Published : Aug 16 2024, 12:53 AM IST / Updated: Aug 16 2024, 05:17 AM IST

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಅವರು ಸತತ 11ನೇ ಬಾರಿಗೆ ಕೆಂಪುಕೋಟೆಯಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿ ಮನಮೋಹನ್ ಸಿಂಗ್ ಅವರ ದಾಖಲೆ ಮುರಿದಿದ್ದಾರೆ. ಜವಾಹರಲಾಲ್ ನೆಹರು ಮತ್ತು ಇಂದಿರಾ ಗಾಂಧಿ ನಂತರ ಅತಿ ಹೆಚ್ಚು ಬಾರಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಮೂರನೇ ಪ್ರಧಾನಿ ಎನಿಸಿಕೊಂಡಿದ್ದಾರೆ.

ನವದೆಹಲಿ: ಸತತ 11ನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ 10 ಬಾರಿ ಧ್ವಜಾರೋಹಣ ಮಾಡಿದ್ದ ಪ್ರಧಾನಿ ಮನಮೋಹನ ಸಿಂಗ್‌ ಅವರ ದಾಖಲೆ ಮುರಿದಿದ್ದಾರೆ.

ಅಲ್ಲದೆ, ಕ್ರಮವಾಗಿ 17 ಹಾಗೂ 16 ಸಲ ಧ್ವಜವಂದನೆ ಮಾಡಿದ್ದ ಪಂ. ಜವಾಹರಲಾಲ್ ನೆಹರು ಮತ್ತು ಅವರ ಪುತ್ರಿ, ಇಂದಿರಾ ಗಾಂಧಿ ಅವರ ನಂತರ, ಅತಿ ಹೆಚ್ಚು ಬಾರಿ ಕೆಂಪುಕೋಟೆ ಮೇಲೆ ಧ್ವಜ ಹಾರಿಸಿದ 3ನೇ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಮೋದಿ ಅವರು ದೇಶವನ್ನುದ್ದೇಶಿಸಿ ಮಾಡಿದ ಸತತ 11ನೇ ಭಾಷಣ ಇದಾಗಿದ್ದು, ಸತತ ಮೂರನೇ ಅವಧಿಗೆ ಅಧಿಕಾರಕ್ಕೆ ಮರಳಿದ ನಂತರ ಅವರ ಮೊದಲ ಭಾಷಣವಾಗಿತ್ತು.