370ನೇ ವಿಧಿ ರದ್ದು ಬಳಿಕ ಇಂದು ಮೊದಲ ಬಾರಿಗೆ ಕಾಶ್ಮೀರಕ್ಕೆ ಮೋದಿ ಭೇಟಿ

| Published : Mar 07 2024, 01:49 AM IST

370ನೇ ವಿಧಿ ರದ್ದು ಬಳಿಕ ಇಂದು ಮೊದಲ ಬಾರಿಗೆ ಕಾಶ್ಮೀರಕ್ಕೆ ಮೋದಿ ಭೇಟಿ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಬಹಳ ದೀರ್ಘ ಸಮಯದ ಬಳಿಕ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡುತ್ತಿದ್ದು, ಬಹು ಕೋಟಿ ವೆಚ್ಚದ ಕಾಮಗಾರಿಗಳನ್ನು ಅನಾವರಣಗೊಳಿಸಲಿದ್ದಾರೆ.

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ ಸಂವಿಧಾನದ 370ನೇ ವಿಧಿ ರದ್ದುಪಡಿಸಿದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಕಾಶ್ಮೀರಕ್ಕೆ ಭೇಟಿ ನೀಡುತ್ತಿದ್ದಾರೆ.

ಗುರುವಾರ ಶ್ರೀನಗರದ ಬಕ್ಷಿ ಕ್ರೀಡಾಂಗಣದಲ್ಲಿ ನಡೆಯಲಿರುವ ‘ವಿಕಸಿತ್‌ ಭಾರತ, ವಿಕಸಿತ್‌ ಜಮ್ಮು ಕಾಶ್ಮೀರ’ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಅವರು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೃಷಿ-ಆರ್ಥಿಕತೆಯನ್ನು ಉತ್ತೇಜಿಸಲು ಸುಮಾರು 5,000 ಕೋಟಿ ರು. ಯೋಜನೆಯೊಂದಿಗೆ, ಬಹು ಅಭಿವೃದ್ಧಿ ಯೋಜನೆಗಳನ್ನು ಅನಾವರಣಗೊಳಿಸಲಿದ್ದಾರೆ.

2019ರಲ್ಲಿ ಕೇಂದ್ರ ಸರ್ಕಾರ ಸಂವಿಧಾನದ 370ನೇ ವಿಧಿ ರದ್ದುಪಡಿಸುವ ಮಹತ್ವದ ನಿರ್ಧಾರ ಕೈಗೊಂಡಿತ್ತು.