ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಕೂದಲೆಳೆ ಅಂತರದಲ್ಲಿ ಮೆಹಬೂಬಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಶ್ರೀನಗರ: ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಕೂದಲೆಳೆ ಅಂತರದಲ್ಲಿ ಮೆಹಬೂಬಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

ಗುರುವಾರ ಅನಂತ್‌ನಾಗ್‌ ಜಿಲ್ಲೆಯ ಸಂಗಮ್‌ನಲ್ಲಿ ಮೆಹಬೂಬಾ ಅವರು ಪ್ರಯಾಣಿಸುತ್ತಿದ್ದ ಕಾರು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಈ ವೇಳೆ ಮೆಹಬೂಬಾ ಕಾರಿನ ಮುಂಭಾಗ ಬಹುತೇಕ ನಜ್ಜುಗುಜ್ಜಾಗಿದೆ. 

ಅದೃಷ್ಟವಶಾತ್‌ ಮೆಹಬೂಬಾ ಅವರಿಗೆ ಯಾವುದೇ ಗಾಯಗಳಾಗಿಲ್ಲ. ಆದರೆ ಆಕೆಯ ಭದ್ರತೆಗೆಂದು ನೇಮಿಸಲಾಗಿರುವ ಪೊಲೀಸ್‌ ಅಧಿಕಾರಿಯೋರ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ.