ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ : ಕನ್ನಡಕ್ಕೆ ಎರಡು ಗರಿ

| N/A | Published : Aug 02 2025, 05:30 AM IST

Shah-Rukh-Khan-National-Award-Actors-Who-Never-Won
ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ : ಕನ್ನಡಕ್ಕೆ ಎರಡು ಗರಿ
Share this Article
  • FB
  • TW
  • Linkdin
  • Email

ಸಾರಾಂಶ

71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಶುಕ್ರವಾರ ಪ್ರಕಟಿಸಲಾಗಿದ್ದು, ಕನ್ನಡಕ್ಕೆ ಎರಡು ರಾಷ್ಟ್ರೀಯ ಪ್ರಶಸ್ತಿ ಒಲಿದು ಬಂದಿದೆ.

  ನವದೆಹಲಿ :    71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಶುಕ್ರವಾರ ಪ್ರಕಟಿಸಲಾಗಿದ್ದು, ಕನ್ನಡಕ್ಕೆ ಎರಡು ರಾಷ್ಟ್ರೀಯ ಪ್ರಶಸ್ತಿ ಒಲಿದು ಬಂದಿದೆ. ಮಡಿಕೇರಿಯ ಯಶೋದಾ ಪ್ರಕಾಶ್ ನಿರ್ದೇಶನದ ‘ಕಂದೀಲು’ ಚಿತ್ರವು ಫೀಚರ್‌ ಫಿಲ್ಮ್‌ ವಿಭಾಗದಲ್ಲಿ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಗೆದ್ದರೆ, ಮೈಸೂರಿನ ವೈದ್ಯ ಡಾ. ಚಿದಾನಂದ ಎಸ್‌. ನಾಯ್ಕ್‌ ನಿರ್ದೇಶನದ ‘ಸನ್​ಫ್ಲವರ್ಸ್​​ ವರ್​ ದಿ ಫಸ್ಟ್ ಒನ್ಸ್ ಟು ನೋ’ಅತ್ಯುತ್ತಮ ಸಂಭಾಷಣೆ ವಿಭಾಗದಲ್ಲಿ ಪ್ರಶಸ್ತಿ ಪಡೆದುಕೊಂಡಿದೆ. 

ಇನ್ನು, ನಟ ಶಾರುಖ್ ಖಾನ್ ‘ಜವಾನ್’ ಚಿತ್ರ ಹಾಗೂ ವಿಕ್ರಾಂತ್ ಮ್ಯಾಸ್ಸೆ ‘ಟ್ವೆಲ್ತ್ ಫೇಲ್’ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾಗಿದ್ದಾರೆ. ‘ಮಿಸ್ಟ್ರೆಸ್ ಚಟರ್ಜಿ ವರ್ಸಸ್ ನಾರ್ವೆ’ ಚಿತ್ರಕ್ಕಾಗಿ ನಟಿ ರಾಣಿ ಮುಖರ್ಜಿ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದಿದ್ದಾರೆ.

ಶಾರುಖ್‌ಗೆ ಮೊದಲ ಗೌರವ: 1992ರಲ್ಲಿ ಚಿತ್ರರಂಗ ಪ್ರವೇಶಿಸಿದ್ದ ಶಾರುಖ್‌ ಖಾನ್‌ ಇದುವರೆಗೂ 100ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರಾದರೂ ಇದು ಅವರಿಗೆ ಸಿಗುತ್ತಿರುವ ಮೊದಲ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಾಗಿದೆ.

ಕರಣ್ ಜೋಹರ್ ನಿರ್ದೇಶನದ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಅತ್ಯುತ್ತಮ ಜನಪ್ರಿಯ ಚಲನಚಿತ್ರ ಪ್ರಶಸ್ತಿಯನ್ನು ಪಡೆದುಕೊಂಡರೆ, ಮೇಘನಾ ಗುಲ್ಜಾರ್ ಅವರ ‘ಸ್ಯಾಮ್ ಬಹದ್ದೂರ್’ ರಾಷ್ಟ್ರೀಯ, ಸಾಮಾಜಿಕ ಮತ್ತು ಪರಿಸರ ಮೌಲ್ಯಗಳನ್ನು ಉತ್ತೇಜಿಸುವ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ ಪಡೆದಿದೆ. ಇದು ವೇಷಭೂಷಣ ಮತ್ತು ಮೇಕಪ್ ವಿಭಾಗದಲ್ಲಿಯೂ ಪ್ರಶಸ್ತಿಗಳನ್ನು ಬಾಚಿಕೊಂಡಿದೆ.

Read more Articles on