ಜೂ.4ಕ್ಕೆ ಬಿಜೆಪಿ ಸರ್ಕಾರ ಬರಲಿದೆ ಎಂದ ಮೋದಿಗೆ ತಿರುಗೇಟು ನೀಡಿರುವ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಬಿಜೆಪಿ ಹಗಲುಗನಸು ಕಾಣುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.
ಭುವನೇಶ್ವರ: ಜೂ.4ಕ್ಕೆ ಒಡಿಶಾದಲ್ಲಿ ಬಿಜೆಡಿ ಸರ್ಕಾರದ ಅವಧಿ ಮುಗಿಯಲಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ನವೀನ್ ಪಟ್ನಾಯಕ್, ಒಡಿಶಾದಲ್ಲಿ ಸರ್ಕಾರ ರಚನೆ ಕುರಿತು ಬಿಜೆಪಿ ಹಗಲುಗನಸು ಕಾಣುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.
ಇದೇ ವೇಳೆ ಮೋದಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ನವೀನ್ ಪಟ್ನಾಯಕ್ ಆಪ್ತ ವಿ.ಕೆ.ಪಾಂಡಿಯನ್, ‘ಜೂ.9ರಂದು ಬೆಳಗ್ಗೆ 11.30- 1.30ರ ಅವಧಿಯಲ್ಲಿ ನವೀನ್ ಪಟ್ನಾಯಕ್ ಅವರು ಒಡಿಶಾ ಮುಖ್ಯಮಂತ್ರಿಯಾಗಿ 6ನೇ ಬಾರಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Latest Videos
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.