ಸಾರಾಂಶ
ಇತ್ತೀಚೆಗೆ ನಡೆದ ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ ಭಾರತೀಯ ಜನತಾ ಪಕ್ಷದ ಶಾಸಕಾಂಗ ಪಕ್ಷದ ನಾಯಕರಾಗಿ, ಹಾಲಿ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರನ್ನು ಆಯ್ಕೆ ಮಾಡಲಾಗಿದೆ.
ಚಂಡೀಗಢ: ಇತ್ತೀಚೆಗೆ ನಡೆದ ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ ಭಾರತೀಯ ಜನತಾ ಪಕ್ಷದ ಶಾಸಕಾಂಗ ಪಕ್ಷದ ನಾಯಕರಾಗಿ, ಹಾಲಿ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರನ್ನು ಆಯ್ಕೆ ಮಾಡಲಾಗಿದೆ.
ಕೇಂದ್ರದ ವಿಕ್ಷಕರಾಗಿ ಆಗಮಿಸಿದ್ದ ಅಮಿತ್ ಶಾ ಸಮ್ಮುಖದಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆದಿದೆ. ಆಯ್ಕೆ ಬೆನ್ನಲ್ಲೇ ಸೈನಿ, ರಾಜ್ಯಪಾಲರ ಬಂಡಾರು ದತ್ತಾತ್ರೇಯ ಅವರನ್ನು ಭೇಟಿಯಾಗಿ ಸರ್ಕಾರ ರಚನೆಯ ಹಕ್ಕು ಮಂಡಿಸಿದರು.ಇದರ ಬೆನ್ನಲ್ಲೇ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರನ್ನು ಭೇಟಿಯಾದ ಸೈನಿ, ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದಾರೆ.
ಇಂದು ಪ್ರಮಾಣ:ಸಿಎಂ ಆಗಿ ಸೈನಿ ಗುರುವಾರ ಪ್ರಮಾಣ ಸ್ವೀಕರಿಸಲಿದ್ದು, ಶಪಥ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗವಹಿಸಲಿದ್ದಾರೆ. ಈ ಮೂಲಕ ಮಾರ್ಚ್‌ನಲ್ಲಿ ಮನೋಹರ್ ಲಾಲ್ ಖಟ್ಟರ್ ಬದಲಿಗೆ ಸಿಎಂ ಆಗಿ ನೇಮಕಗೊಂಡಿದ್ದ ಸೈನಿ ಅದೇ ಹುದ್ದೆಯಲ್ಲಿ ಮುಂದುವರೆಯುವ ಅವಕಾಶ ಪಡೆದುಕೊಂಡಿದ್ದಾರೆ.
90 ಸ್ಥಾನ ಬಲದ ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 48 ಸ್ಥಾನ ಗೆದ್ದಿತ್ತು. ಅಧಿಕಾರದ ಕನಸಿನಲ್ಲಿದ್ದ ಕಾಂಗ್ರೆಸ್ 37 ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗಿ ಬಂದಿತ್ತು.