ಸಾರಾಂಶ
ನೀಟ್ ಪರೀಕ್ಷೆಯನ್ನು ಇದೇ ಮೊದಲ ಬಾರಿಗೆ ಎನ್‌ಟಿಎ ವಿದೇಶಗಳಲ್ಲೂ ಪರೀಕ್ಷಾ ಕೇಂದ್ರ ತೆರೆಯಲು ಸೂಚನೆ ನೀಡಿದೆ.
ನವದೆಹಲಿ: ದೇಶಾದ್ಯಂತ ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶ ಕಲ್ಪಿಸಲು ನಡೆಸುವ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್) ಯನ್ನು ಇದೇ ಮೊದಲ ಬಾರಿಗೆ ವಿದೇಶಗಳಲ್ಲೂ ನಡೆಸುವುದಾಗಿ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ(ಎನ್‌ಟಿಎ) ತಿಳಿಸಿದೆ.
ಮೇ.5ರಂದು ನಡೆಯುವ ಪರೀಕ್ಷೆಗೆ ಅಧಿಸೂಚನೆ ಹೊರಡಿಸಿದ ನಂತರ ವಿದೇಶಗಳಲ್ಲೂ ಪರೀಕ್ಷಾ ಕೇಂದ್ರಗಳನ್ನು ತೆರೆಯುವಂತೆ ಬೇಡಿಕೆ ಬಂದ ಹಿನ್ನೆಲೆಯಲ್ಲಿ 12 ರಾಷ್ಟ್ರಗಳ 14 ನಗರಗಳಲ್ಲಿ ಪರೀಕ್ಷಾ ಕೇಂದ್ರ ತೆರೆಯಲು ತೀರ್ಮಾನಿಸಲಾಗಿದೆ’ ಎಂದು ಪ್ರಕಟಿಸಿದೆ.
ದುಬೈ, ಅಬುಧಾಬಿ, ಶಾರ್ಜಾ, ಕುವೈತ್, ಬ್ಯಾಂಕಾಕ್, ಕೊಲಂಬೋ, ಕಾಠ್ಮಂಡು, ದೋಹಾ, ಕೌಲಾಲಂಪುರ, ಲಾಗೋಸ್, ಮನಾಮಾ, ಮಸ್ಕತ್, ರಿಯಾದ್, ಸಿಂಗಾಪುರ ನಗರಗಳಲ್ಲಿ ಪರೀಕ್ಷೆ ನಡೆಯಲಿದೆ.