ಸಾರಾಂಶ
ಎರ್ನಾಕುಲಂ - ಬೆಂಗಳೂರು ಕಂಟೋನ್ಮೆಂಟ್ ನಡುವೆ ನೂತನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆ ಇಂದಿನಿಂದ ಆರಂಭವಾಗಲಿದ್ದು, ವಾರಕ್ಕೆ ಮೂರು ಬಾರಿ ಎರಡು ನಗರಗಳ ನಡುವೆ ಸಂಚರಿಸಲಿದೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಎರ್ನಾಕುಲಂ - ಬೆಂಗಳೂರು ಕಂಟೋನ್ಮೆಂಟ್ ನಡುವೆ ನೂತನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆ ಇಂದಿನಿಂದ ಆರಂಭವಾಗಲಿದ್ದು, ವಾರಕ್ಕೆ ಮೂರು ಬಾರಿ ಎರಡು ನಗರಗಳ ನಡುವೆ ಸಂಚರಿಸಲಿದೆ.ಈ ರೈಲು ಎರ್ನಾಕುಲಂನಿಂದ ಬುಧವಾರ, ಶುಕ್ರವಾರ ಮತ್ತು ಭಾನುವಾರದಂದು ಹೊರಡುತ್ತದೆ. ಬೆಂಗಳೂರಿನಿಂದ ಗುರುವಾರ, ಶನಿವಾರ ಮತ್ತು ಸೋಮವಾರದಂದು ಸೇವೆ ನೀಡಲಿದೆ. ಎಂಟು ಬೋಗಿಯ ಈ ರೈಲು ಮಧ್ಯಾಹ್ನ 12:50 ಗಂಟೆಗೆ ಎರ್ನಾಕುಲಂ ಜಂಕ್ಷನ್‌ನಿಂದ ಹೊರಟು ರಾತ್ರಿ 10 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣ ತಲುಪಲಿದೆ. ವಾಪಾಸು ರೈಲು ಬೆಂಗಳೂರಿನಿಂದ ಬೆಳಗ್ಗೆ 5.30 ಕ್ಕೆ ಹೊರಟು ಮಧ್ಯಾಹ್ನ 2.20 ಕ್ಕೆ ಎರ್ನಾಕುಲಂ ತಲುಪುತ್ತದೆ. ಮಾರ್ಗದಲ್ಲಿ ತ್ರಿಸ್ಸೂರ್, ಪಾಲಕ್ಕಾಡ್, ಪೊದನೂರ್, ತಿರುಪ್ಪೂರ್, ಈರೋಡ್ ಮತ್ತು ಸೇಲಂ ನಿಲ್ದಾಣಗಳಲ್ಲಿ ರೈಲು ನಿಲುಗಡೆ ಆಗಲಿದೆ ಎಂದು ನೈಋತ್ಯ ರೈಲ್ವೇ ಪ್ರಕಟಣೆ ತಿಳಿಸಿದೆ.