ವಿಮಾನದಲ್ಲಿ ಹುಸಿ ಬಾಂಬ್ ಬೆದರಿಕೆಗಳು ಮುಂದುವರೆದಿದ್ದು, ಮುಂಬೈನಿಂದ ನ್ಯೂಯಾರ್ಕ್‌ಗೆ ತೆರಳುತ್ತಿದ್ದ ಏರಿಂಡಿಯಾ ವಿಮಾನದ ಶೌಚಾಲಯದಲ್ಲಿ ಬಾಂಬ್ ಬೆದರಿಕೆ ಪತ್ರ ಪತ್ತೆಯಾಗಿದೆ.  

ಮುಂಬೈ: ವಿಮಾನದಲ್ಲಿ ಹುಸಿ ಬಾಂಬ್ ಬೆದರಿಕೆಗಳು ಮುಂದುವರೆದಿದ್ದು, ಮುಂಬೈನಿಂದ ನ್ಯೂಯಾರ್ಕ್‌ಗೆ ತೆರಳುತ್ತಿದ್ದ ಏರಿಂಡಿಯಾ ವಿಮಾನದ ಶೌಚಾಲಯದಲ್ಲಿ ಬಾಂಬ್ ಬೆದರಿಕೆ ಪತ್ರ ಪತ್ತೆಯಾಗಿದೆ. 

ಈ ಹಿನ್ನೆಲೆಯಲ್ಲಿ ವಿಮಾನವನ್ನು ಮುಂಬೈನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿ ತಪಾಸಿಸಿದ ಘಟನೆ ನಡೆದಿದೆ. 

ಬಳಿಕ ಅದು ಹುಸಿ ಬೆದರಿಕೆ ಎಂದು ಸಾಬೀತಾಗಿದೆ.19 ಸಿಬ್ಬಂದಿ ಸೇರಿದಂತೆ 322 ಮಂದಿಯನ್ನು ಹೊತ್ತೊಯ್ಯುತ್ತಿದ್ದ ವಿಮಾನದ ಶೌಚಾಲಯದಲ್ಲಿ ಬೆದರಿಕೆ ಪತ್ರ ಸಿಕ್ಕಿತ್ತು. ಇದನ್ನು ನೋಡಿದ ಪ್ರಯಾಣಿಕರು ಮಾಹಿತಿ ನೀಡಿದ್ದರು. ಹೀಗಾಗಿ ವಿಮಾನವನ್ನು ಮತ್ತೆ ಮುಂಬೈಗೆ ತಿರುಗಿಸಿ ತಪಾಸಿಸಲಾಯಿತು, ತಪಾಸಣೆ ವೇಳೆ ಯಾವುದೇ ಅನುಮಾನಸ್ಪದ ವಸ್ತುಗಳು ಪತ್ತೆಯಾಗಿಲ್ಲ.