ಸಾರಾಂಶ
ಖಲಿಸ್ತಾನಿಗಳ ಜೊತೆ ಕೆಲವು ಗ್ಯಾಂಗ್‌ಸ್ಟರ್‌ಗಳು ನಂಟು ಹೊಂದಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ದೇಶದ 30 ಕಡೆ ಏಕಕಾಲಕ್ಕೆ ದಾಳಿ ನಡೆಸಿದೆ.
ನವದೆಹಲಿ: ಖಲಿಸ್ತಾನಿ ಉಗ್ರರು ಹಾಗೂ ಗ್ಯಾಂಗ್‌ಸ್ಟರ್‌ಗಳ ನಂಟು ಪ್ರಕರಣಕ್ಕೆ ಸಂಬಂಧಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಸೋಮವಾರ 4 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದ 30 ಕಡೆ ಶೋಧ ನಡೆಸಿದೆ.
ಪಂಜಾಬ್, ಹರಿಯಾಣ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಚಂಡೀಗಢದ ಕೇಂದ್ರಾಡಳಿತ ಪ್ರದೇಶ ಸೇರಿದಂತೆ ಒಟ್ಟು 30 ಸ್ಥಳಗಳಲ್ಲಿ ವ್ಯಾಪಕ ಶೋಧ ನಡೆಸಿದೆ. ದಾಳಿ ವೇಳೆ ಹಲವು ಶಸ್ತ್ರಾಸ್ತ್ರ ಹಾಗೂ ದಾಖಲೆಗಳನ್ನು ವಶಕ್ಕೆ ತೆಗೆದುಕೊಂಡಿದೆ ಎಂದು ಮೂಲಗಳು ತಿಳಿಸಿವೆ.ಭಯೋತ್ಪಾದನೆ ಮತ್ತು ಮಾಫಿಯಾ ಜಾಲಗಳನ್ನು ಸಂಪೂರ್ಣವಾಗಿ ಕಿತ್ತುಹಾಕುವ ಪ್ರಯತ್ನದ ಭಾಗವಾಗಿ ಈ ಶೋಧ ಕಾರ್ಯಗಳು ನಡೆಯುತ್ತಿವೆ ಎಂದು ಹೇಳಲಾಗಿದೆ.