ಕರ್ನಾಟಕ ಹೈಕೋರ್ಟ್‌ನ ಮುಖ್ಯನ್ಯಾಯಮೂರ್ತಿಯಾಗಿ ನ್ಯಾ. ಅಂಜಾರಿಯಾ ಅವರನ್ನು ಕೇಂದ್ರ ಕಾನೂನು ಸಚಿವಾಲಯ ನೇಮಿಸಿ ಆದೇಶ ಹೊರಡಿಸಿದೆ.

ನವದೆಹಲಿ: ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ನಿಲಯ್‌ ಅಂಜಾರಿಯಾ ಅವರನ್ನು ನೇಮಿಸಿ ಕೇಂದ್ರೀಯ ಕಾನೂನು ಸಚಿವಾಲಯ ಆಧಿಸೂಚನೆ ಹೊರಡಿಸಿದೆ.

ಪ್ರಸ್ತುತ ಮುಖ್ಯ ನ್ಯಾಯಾಧೀಸ ನ್ಯಾ। ದಿನೇಶ್‌ ಕುಮಾರ್‌ ಫೆ.24ರಂದು ಸೇವಾ ನಿವೃತ್ತರಾಗಲಿದ್ದು, ಅದರ ಬಳಿಕ ನ್ಯಾ। ಅಂಜಾರಿಯಾ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

ಪ್ರಸ್ತುತ ಅಂಜಾರಿಯಾ ಅವರು ಗುಜರಾತ್‌ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಇವರ ಹೆಸರನ್ನು ಕೊಲಿಜಿಯಂ, ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು.