ಸಾರಾಂಶ
ನಿತೀಶ್ ಕುಮಾರ್ ತೇಜಸ್ವಿ ಯಾದವ್ ಅವರು ಸಚಿವರಾಗಿದ್ದಾಗ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ತನಿಖೆಗೆ ಆದೇಶಿಸಿದ್ದಾರೆ.
ಪಟನಾ: ಇತ್ತೀಚೆಗಷ್ಟೇ ಆರ್‌ಜೆಡಿ ಜೊತೆಗಿನ ಮೈತ್ರಿ ಕಡಿದುಕೊಂಡು ಬಿಜೆಪಿ ಜೊತೆ ಸೇರಿ ಹೊಸದಾಗಿ ಸರ್ಕಾರ ರಚಿಸಿದ್ದ ಬಿಹಾರದ ಮುಖ್ಯಮಂತ್ರಿ, ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಇದೀಗ ಹಿಂದಿನ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದ ತೇಜಸ್ವಿ ಯಾದವ್ ವಿರುದ್ಧವೇ ತನಿಖೆಗೆ ಆದೇಶಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ನಿತೀಶ್, ‘ಸಚಿವರಾದ ತೇಜಸ್ವಿ ಯಾದವ್, ಲಲಿತ್ ಯಾದವ್ ಹಾಗೂ ರಮಾನಂದ ಯಾದವ್ ಅವರು ನಿರ್ವಹಿಸುತ್ತಿದ್ದ ಖಾತೆಗಳಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ.ಹೀಗಾಗಿ ಈ ಕುರಿತು ತನಿಖೆಗೆ ಆದೇಶಿಸಿದ್ದು, ತನಿಖೆಗೆ ಪ್ರಾರಂಭವಾಗಿದೆ ಎಂದು ಹೇಳಿದ್ದಾರೆ.