ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ,ಎಸ್, ಯಡಿಯೂರಪ್ಪ ಅವರ ಬಂಧನಕ್ಕೆ ತಡೆ ನೀಡಿರುವ ಕರ್ನಾಟಕ ಹೈಕೋರ್ಟ್‌ ನಡೆಗೆ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಶ್ರೀನಗರ: ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ,ಎಸ್, ಯಡಿಯೂರಪ್ಪ ಅವರ ಬಂಧನಕ್ಕೆ ತಡೆ ನೀಡಿರುವ ಕರ್ನಾಟಕ ಹೈಕೋರ್ಟ್‌ ನಡೆಗೆ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

‘ಯಡಿಯೂರಪ್ಪ ಅವರದೇ ರೀತಿ ಆರೋಪ ಹೊತ್ತಿರುವ ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ ಹೇಮಂತ್‌ ಸೋರೆನ್‌ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ವಿಚಾರದಲ್ಲಿ ನ್ಯಾಯಾಲಯ ಏಕೆ ಜಾಮೀನು ನೀಡಿಲ್ಲ?’ ಎಂದು ಅವರು ಪ್ರಶ್ನಿಸಿದ್ದು, ’ಈ ರೀತಿ ಭಿನ್ನ ಸ್ವರೂಪದ ತೀರ್ಪುಗಳು ಆಯ್ದ ನ್ಯಾಯ ನೀಡುವುದನ್ನು ತೋರ್ಪಡಿಸುತ್ತದೆ’ ಎಂದು ಟ್ವೀಟ್‌ ಮಾಡಿದ್ದಾರೆ.

ಯಡಿಯೂರಪ್ಪ ಮಾಜಿ ಮುಖ್ಯಮಂತ್ರಿಯಾಗಿದ್ದು, ಅವರು ಎಲ್ಲೂ ಓಡಿ ಹೋಗುವುದಿಲ್ಲ ಎಂಬ ಕಾರಣ ನೀಡಿ ಅವರ ಬಂಧನ ವಾರಂಟ್‌ ಅನ್ನು ಹೈಕೋರ್ಟ್‌ ರದ್ದು ಮಾಡಿತ್ತು.