ಸಾರಾಂಶ
ಅಕ್ರಮ ವಲಸಿಗರು ಭಾರತೀಯ ಪೌರತ್ವ ಪಡೆಯುವುದನ್ನು ತಡೆಗಟ್ಟುವ ಉದ್ದೇಶದಿಂದ, 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಅಸ್ಸಾಂನಲ್ಲಿ ಹೊಸದಾಗಿ ಆಧಾರ್ ಕಾರ್ಡ್ ನೀಡಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಘೋಷಿಸಿದ್ದಾರೆ.
ಗುವಾಹಟಿ: ಅಕ್ರಮ ವಲಸಿಗರು ಭಾರತೀಯ ಪೌರತ್ವ ಪಡೆಯುವುದನ್ನು ತಡೆಗಟ್ಟುವ ಉದ್ದೇಶದಿಂದ, 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಅಸ್ಸಾಂನಲ್ಲಿ ಹೊಸದಾಗಿ ಆಧಾರ್ ಕಾರ್ಡ್ ನೀಡಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಘೋಷಿಸಿದ್ದಾರೆ.
ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘18 ವರ್ಷಕ್ಕಿಂತ ಮೇಲ್ಪಟ್ಟವರು ಇನ್ನೂ ಆಧಾರ್ ಕಾರ್ಡ್ ಪಡೆಯದಿದ್ದರೆ, ಅರ್ಜಿ ಸಲ್ಲಿಸಲು ಕೇವಲ ಒಂದು ತಿಂಗಳ ಕಾಲಾವಕಾಶ ನೀಡಲಾಗುವುದು. ಬಳಿಕ ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಹೊಸದಾಗಿ ಕಾರ್ಡ್ ವಿತರಿಸುವುದಿಲ್ಲ. ಆದರೆ ಟೀ ಬುಡಕಟ್ಟು, ಎಸ್‌ಸಿ ಮತ್ತು ಎಸ್‌ಟಿ ಸಮುದಾಯದವರಿಗೆ ಮುಂದಿನ ಒಂದು ವರ್ಷದವರೆಗೆ ಅವಕಾಶ ನೀಡಲಾಗುವುದು. ಬಾಂಗ್ಲಾದೇಶದಿಂದ ಅಕ್ರಮ ವಲಸಿಗರ ಆತಂಕ ಹೆಚ್ಚಿರುವ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ’ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ತಿಳಿಸಿದರು.