ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವೇಳೆ ಅಕ್ರಮ ನಡೆದಿದೆ ಎಂದು ಆರೋಪಿಸಿ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಇತರೆ 12 ಪ್ರತಿಪಕ್ಷ ನಾಯಕರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿ, ಸುಪ್ರೀಂ ಚುನಾವಣಾ ಆಯೋಗ , ಜ್ಞಾನೇಶ್ ಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿದೆ.
ನವದೆಹಲಿ : ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್ಐಆರ್) ವೇಳೆ ಅಕ್ರಮ ನಡೆದಿದೆ ಎಂದು ಆರೋಪಿಸಿ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಇತರೆ 12 ಪ್ರತಿಪಕ್ಷ ನಾಯಕರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿ, ಸುಪ್ರೀಂ ಕೋರ್ಟ್ ಗುರುವಾರ ಚುನಾವಣಾ ಆಯೋಗ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿದೆ.
ಇದೇ ವೇಳೆ, ಅ.12ರಂದು ಸುಪ್ರೀಂ ಕೋರ್ಟ್ ಚಲೋ ನಡೆಸಿದ ರಾಹುಲ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರತಿಪಕ್ಷಗಳ ನಾಯಕರ ಬಗ್ಗೆ ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿರುವ ಅದು, ಇವರಿಂದಲೂ ಸ್ಪಷ್ಟನೆ ಬಯಸಿ ನೋಟಿಸ್ ಜಾರಿ ಮಾಡಿದೆ. ‘ನ್ಯಾಯಾಂಗವನ್ನು ಯಾರೂ ಹೆದರಿಸಲು ಸಾಧ್ಯವಿಲ್ಲ. ಮುಂದಿನ ವಿಚಾರಣೆ ವೇಳೆ ಒಬ್ಬರ ನಡೆ ಕುರಿತು ಪ್ರಶ್ನಿಸುತ್ತೇವೆ’ ಎಂದು ಪರೋಕ್ಷವಾಗಿ ರಾಹುಲ್ಗೆ ತಿವಿದಿದೆ.
ಸುಪ್ರೀಂ ಕೋರ್ಟ್ ಚಲೋ ಪ್ರಶ್ನಿಸಿ ಹಲವು ಅರ್ಜಿಗಳು ಪ್ರತ್ಯೇಕವಾಗಿ ಸಲ್ಲಿಕೆ
ಎಸ್ಐಆರ್ ಪ್ರಕ್ರಿಯೆ ಪ್ರಶ್ನಿಸಿ ಹಾಗೂ ರಾಹುಲ್ ಗಾಂಧಿ ನೇತೃತ್ವದಲ್ಲಿ ಎಸ್ಐಆರ್ ವಿರೋಧಿಸಿ ಇತ್ತೀಚೆಗೆ ನಡೆದ ಸುಪ್ರೀಂ ಕೋರ್ಟ್ ಚಲೋ ಪ್ರಶ್ನಿಸಿ ಹಲವು ಅರ್ಜಿಗಳು ಪ್ರತ್ಯೇಕವಾಗಿ ಸಲ್ಲಿಕೆ ಆಗಿದ್ದವು. ಒಟ್ಟಿಗೇ ಇವುಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾ. ಜಯಮಾಲ್ಯ ಬಾಗ್ಜಿ ಅವರಿದ್ದ ಪೀಠವು ಮೊದಲು ಸಿಇಸಿ ಜ್ಞಾನೇಶ್ ಕುಮಾರ್ ಹಾಗೂ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿತು.
ಸಿಜೆಐ ಸೂರ್ಯಕಾಂತ್ ಅವರು ಪರೋಕ್ಷ ಅಸಮಾಧಾನ
ಈ ವೇಳೆ ಕೆಲ ವಕೀಲರು ಸುಪ್ರೀಂ ಕೋರ್ಟ್ಗೆ ರಾಹುಲ್ ಗಾಂಧಿ ಅವರ ಸುಪ್ರೀಂ ಕೋರ್ಟ್ ಚಲೋ ಕುರಿತು ಪ್ರಸ್ತಾಪಿಸಿದಾಗ ಪ್ರತಿಪಕ್ಷ ನಾಯಕನ ನಡೆಗೆ ಸಿಜೆಐ ಸೂರ್ಯಕಾಂತ್ ಅವರು ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದರು. ‘ಯಾರೂ ನ್ಯಾಯಾಂಗವನ್ನು ಬೆದರಿಸಲು ಸಾಧ್ಯವಿಲ್ಲ. ನಾವೇನು ದಂತಗೋಪುರದ ಮೇಲೆ ಕೂತಿಲ್ಲ. ಮುಂದಿನ ವಿಚಾರಣೆ ವೇಳೆ ಪ್ರತಿಪಕ್ಷಗಳ 13 ಮಂದಿ ಅರ್ಜಿದಾರರಲ್ಲಿ ಒಬ್ಬರ ನಡೆಯನ್ನು ಪ್ರಶ್ನೆ ಮಾಡಲಿದ್ದೇವೆ’ ಎಂದು ಹೇಳಿದರು.
ಇದೇ ವೇಳೆ, ‘ಹೊರಗೆ ಅವರು ನೀಡುತ್ತಿರುವ ಹೇಳಿಕೆಗಳು ಹಾಗೂ ಕೋರ್ಟ್ ಒಳಗೆ ನೀಡುತ್ತಿರುವ ಹೇಳಿಕೆಗಳ ಕುರಿತು ನಮಗೆ ಅರಿವಿದೆ. ನಮಗೆ ಎಲ್ಲವೂ ಗೊತ್ತಿದೆ’ ಎಂದರು. ಬಳಿಕ ರ್ಯಾಲಿ ಸಂಬಂಧ ರಾಹುಲ್ ಗಾಂಧಿ, ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಸೇರಿ ಇತರರಿಗೆ ನೋಟಿಸ್ ಅನ್ನೂ ಜಾರಿ ಮಾಡಿದರು.
ಇದೇ ವೇಳೆ ಪೀಠವು, ಇಂಡಿಯನ್ ಎಕ್ಸ್ಪ್ರೆಸ್ ವರದಿಯನ್ನು ಮುಂದಿಟ್ಟುಕೊಂಡು ಎಸ್ಐಆರ್ ಅನ್ನು ರದ್ದುಪಡಿಸುವಂತೆ ಕೋರಿ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿ ಜ್ಞಾನೇಶ್, ಚುನಾವಣಾ ಆಯೋಗ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿತು.
ಹಿರಿಯ ಪೊಲೀಸ್ ಅಧಿಕಾರಿಯಿಂದ ಮಹಿಳಾ ಪತ್ರಕರ್ತೆ ಮೇಲೆ ಲೈಂಗಿಕ ಕಿರುಕುಳದ ಆರೋಪಕ್ಕೆ ಸಂಬಂಧಿಸಿ ಆಕೆ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸೂಚಿಸಿತು. ಈ ಸಂದರ್ಭದಲ್ಲಿ ಬಿಜೆಪಿ ಪರ ವಕೀಲ ಭಾಟಿಯಾ ಅವರು ಗರ್ಭಿಣಿ ಪತ್ರಕರ್ತೆಯೊಬ್ಬರನ್ನು ಸುಪ್ರೀಂ ಕೋರ್ಟ್ ಆವರಣದಲ್ಲಿ ರಾಹುಲ್ ಗಾಂಧಿ ತಳ್ಳಿದ ಪ್ರಕರಣದ ವಿಚಾರ ಗಮನಕ್ಕೆ ತಂದಿದ್ದು, ಇದಕ್ಕಾಗಿ ಪ್ರತ್ಯೇಕ ಅರ್ಜಿ ಸಲ್ಲಿಸುವಂತೆ ನಿರ್ದೇಶನ ನೀಡಿತು.
ಜಿರಳೆಗಳಿಂದ ಇಂದು ದೆಹಲಿಯಲ್ಲಿ ‘ತ್ರಿವರ್ಣ ಧ್ವಜ ಹಾರಿಸಿ’ ಧರಣಿ
ನವದೆಹಲಿ: ತಮ್ಮಿಬ್ಬರು ಆಪ್ತರಾದ ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಬಂಧನ ವಿರುದ್ಧ ದೆಹಲಿಯ ಕನಾಟ್ ಪ್ರದೇಶದಲ್ಲಿರುವ ಸೆಂಟ್ರಲ್ ಪಾರ್ಕ್ನಲ್ಲಿ ಶುಕ್ರವಾರ ಸಂಜೆ 5 ಗಂಟೆಗೆ ಸಿಜೆಪಿ ಮುಖ್ಯಸ್ಥ ಅಭಿಜೀತ್ ದೀಪ್ಕೆ ‘ತ್ರಿವರ್ಣ ಧ್ವಜ ಹಾರಿಸಿ’ ಅಭಿಯಾನಕ್ಕೆ ಕರೆ ನೀಡಿದ್ದಾರೆ. ಪೊಲೀಸರು ಬ್ಯಾರಿಕೇಡ್ ಅಳವಡಿಸಿ ಬಂದೋಬಸ್ತ್ ಮಾಡಿದ್ದಾರೆ.

