ಸಾರಾಂಶ
ಖ್ಯಾತ ಬಾಲಿವುಡ್ ಗಾಯಕಿ ಅನುರಾಧಾ ಪೌಡ್ವಾಲ್ ಶನಿವಾರ ಇಲ್ಲಿ ಬಿಜೆಪಿಗೆ ಸೇರ್ಪಡೆಯಾದರು
ನವದೆಹಲಿ: ಖ್ಯಾತ ಬಾಲಿವುಡ್ ಗಾಯಕಿ ಅನುರಾಧಾ ಪೌಡ್ವಾಲ್ ಶನಿವಾರ ಇಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ಪಕ್ಷದ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಪಕ್ಷಕ್ಕೆ ಸೇರಲು ಸಂತೋಷವಾಗಿದೆ ಎಂದು ಹೇಳಿದರು. ಪದ್ಮಶ್ರೀ ಪ್ರಶಸ್ತಿ ವಿಜೇತರಾಗಿರುವ ಈ ಪ್ರಸಿದ್ಧ ಹಿನ್ನೆಲೆ ಗಾಯಕಿಯನ್ನು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಮತ್ತು ಮುಖ್ಯ ವಕ್ತಾರ ಅನಿಲ್ ಬಲುನಿ ಹಾಗೂ ಇತರ ಹಿರಿಯ ನಾಯಕರು ಬರಮಾಡಿಕೊಂಡರು.