ಸಾರಾಂಶ
ರಾಮಮಂದಿರದ ಉಳಿದ ಕಾಮಗಾರಿಯನ್ನು ಶೀಘ್ರದಲ್ಲೇ ಆರಂಭಿಸುವುದಾಗಿ ಶ್ರೀ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ನೃಪೇಂದ್ರ ಮಿಶ್ರಾ ತಿಳಿಸಿದ್ದಾರೆ.
ಅಯೋಧ್ಯೆ: ರಾಮಮಂದಿರದಲ್ಲಿ ದರ್ಬಾರ್ ಹಾಲನ್ನು ಒಳಗೊಂಡಿರುವ ಮೊದಲ ಮಹಡಿ ಕಾಮಗಾರಿಯನ್ನು ಶೀಘ್ರದಲ್ಲೇ ಪ್ರಾರಂಭಿಸುವುದಾಗಿ ಶ್ರೀ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ತಿಳಿಸಿದ್ದಾರೆ.
ಈ ಕುರಿತು ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಶ್ರೀ ರಾಮಮಂದಿದಲ್ಲಿ ಬಾಕಿ ಉಳಿದಿರುವ ಮೊದಲ ಮತ್ತು ಎರಡನೇ ಮಹಡಿಯ ಕಾಮಗಾರಿಯನ್ನು ಶೀಘ್ರದಲ್ಲೇ ಆರಂಭಿಸಲಾಗುವುದು.
ಅಲ್ಲದೆ ಮಂದಿರದ ಪ್ರಾಂಗಣದಲ್ಲಿರುವ ಪರ್ಕೂಟ ಮತ್ತು 795 ಮೀ. ಉದ್ದದ ಪರಿಕ್ರಮದ ಕಾಮಗಾರಿಯನ್ನೂ ಕೈಗೆತ್ತಿಕೊಂಡು ವರ್ಷಾಂತ್ಯದೊಳಗೆ ಮುಕ್ತಾಯಗೊಳಿಸಲು ಯೋಜಿಸಲಾಗಿದೆ’ ಎಂದು ತಿಳಿಸಿದರು.