ಸಂಸತ್ ಮೇಲಿನ ದಾಳಿ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ: ಓಂ ಬಿರ್ಲಾ

| Published : Dec 17 2023, 01:45 AM IST / Updated: Dec 17 2023, 01:46 AM IST

ಸಂಸತ್ ಮೇಲಿನ ದಾಳಿ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ: ಓಂ ಬಿರ್ಲಾ
Share this Article
  • FB
  • TW
  • Linkdin
  • Email

ಸಾರಾಂಶ

ಸಂಸತ್ತಿನ ಮೇಲಿನ ಹೊಗೆಬಾಂಬ್‌ ದಾಳಿಯ ತನಿಖೆಗಾಗಿ ಉನ್ನತ ಮಟ್ಟದ ತನಿಖಾ ಸಮಿತಿಯನ್ನು ರಚಿಸಲಾಗಿದೆ. ಸಮಿತಿ ಶೀಘ್ರ ವರದಿ ಸಲ್ಲಿಸಲಿದ್ದು, ಅದರ ಎಲ್ಲ ಅಂಶಗಳನ್ನು ಸಂಸದರ ಜತೆ ಹಂಚಿಕೊಳ್ಳಲಾಗುತ್ತದೆ ಎಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಶನಿವಾರ ಹೇಳಿದ್ದಾರೆ.

ನವದೆಹಲಿ

ಸಂಸತ್ತಿನ ಮೇಲಿನ ಹೊಗೆಬಾಂಬ್‌ ದಾಳಿಯ ತನಿಖೆಗಾಗಿ ಉನ್ನತ ಮಟ್ಟದ ತನಿಖಾ ಸಮಿತಿಯನ್ನು ರಚಿಸಲಾಗಿದೆ, ಸಮಿತಿ ಶೀಘ್ರ ವರದಿ ಸಲ್ಲಿಸಲಿದ್ದು, ಅದರ ಎಲ್ಲ ಅಂಶಗಳನ್ನು ಸಂಸದರ ಜತೆ ಹಂಚಿಕೊಳ್ಳಲಾಗುತ್ತದೆ ಎಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಶನಿವಾರ ಹೇಳಿದ್ದಾರೆ.ಸಂಸತ್ ಸದಸ್ಯರಿಗೆ ಪತ್ರ ಬರೆದಿರುವ ಅವರು, ಘಟನೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ‘ಸಂಸತ್ತಿನ ಸಂಕೀರ್ಣದಲ್ಲಿ ಭದ್ರತೆಯ ವಿವಿಧ ಅಂಶಗಳನ್ನು ಪರಿಶೀಲಿಸಲು ಮತ್ತು ಅಂತಹ ಘಟನೆಗಳು ಮರುಕಳಿಸದಂತಾಗಲು ಬಲವಾದ ಕ್ರಿಯಾ ಯೋಜನೆಯನ್ನು ರೂಪಿಸಲಾಗುವುದು. ಇದಕ್ಕಾಗಿ ನಾನು ಉನ್ನತಾಧಿಕಾರದ ಸಮಿತಿಯನ್ನು ಸಹ ರಚಿಸಿದ್ದೇನೆ. ಭದ್ರತೆ ಬಲಪಡಿಸಲು ಎಲ್ಲ ಪಕ್ಷಗಳ ನಾಯಕರ ಜತೆ ಚರ್ಚಿಸಿದ್ದೇನೆ’ ಎಂದಿದ್ದಾರೆ.