ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ಕ್ಯಾಮೆರಾ ಹಿಡಿದ ಸಿಎಂ: ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ

| Published : Aug 20 2024, 12:49 AM IST / Updated: Aug 20 2024, 04:57 AM IST

ಸಾರಾಂಶ

ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟಿಸಿ, ಛಾಯಾಗ್ರಾಹಕರ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದರು. 

 ಬೆಂಗಳೂರು :  ವಿಶ್ವ ಛಾಯಾಗ್ರಹಣ ದಿನದ ಪ್ರಯುಕ್ತ ನಗರದ ಚಿತ್ರಕಲಾ ಪರಿಷತ್‌ನಲ್ಲಿ ಪೋಟೋಜರ್ನಲಿಸ್ಟ್ಸ್ಅಸೋಸಿಯೇಶನ್‌ ಆಫ್ ಬೆಂಗಳೂರು ಆಯೋಜಿಸಿದ್ದ ‘ಫ್ರೋಜನ್‌ ಮೆಮೋರಿಸ್‌’ ಛಾಯಚಿತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿ ಛಾಯಾಚಿತ್ರ ಪ್ರದರ್ಶನವನ್ನು ವೀಕ್ಷಿಸಿದರು. 

ಬಳಿಕ ಮಾತನಾಡಿ, ಛಾಯಾಗ್ರಾಹಕರ ನೋವು ನಲಿವುಗಳ ಜೊತೆಗೆ ನಮ್ಮ ಸರ್ಕಾರ ನಿಲ್ಲಲಿದೆ. ಹಿಂದೆ ಛಾಯಾಗ್ರಾಹಕರಿಗೆ ಮಂಜೂರಾಗಿದ್ದ ನಿವೇಶನಗಳ ಹಂಚಿಕೆ ಬಗ್ಗೆ ಪರಿಶೀಲಿಸಿ ಯಾವ ಹಂತದಲ್ಲಿದೆ ಎಂಬುದನ್ನು ತಿಳಿಯಲಾಗುವುದು. ಜತೆಗೆ ಇತರೆಲ್ಲ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು. 

ಛಾಯಾಚಿತ್ರ ಪ್ರದರ್ಶನ ವೀಕ್ಷಿಸಿದ ಸಿದ್ದರಾಮಯ್ಯ ಅವರು ಕ್ಯಾಮೆರಾ ಹಿಡಿದು ಫೋಟೋ ಕ್ಲಿಕ್ಕಿಸಿ ಸಂತಸಪಟ್ಟರು. ಪತ್ರಿಕಾ ಛಾಯಾಗ್ರಾಹಕರ 130 ಛಾಯಾಚಿತ್ರ ಪ್ರದರ್ಶನಗೊಂಡವು. ಈ ವೇಳೆ ಚಿತ್ರಕಲಾ ಪರಿಷತ್‌ನ ಅಧ್ಯಕ್ಷ ಡಾ. ಬಿ.ಎಲ್‌.ಶಂಕರ್‌, ಮಾಜಿ ಸಭಾಪತಿ ವಿ.ಆರ್‌.ಸುದರ್ಶನ್‌, ಸಂಘದ ಅಧ್ಯಕ್ಷ ಮೋಹನ್‌ಕುಮಾರ್‌ ಬಿ.ಎನ್‌. ಸೇರಿ ಇತರರು ಇದ್ದರು.