ಸಾರಾಂಶ
ಕೇರಳ: ದೇಶಿ ನಿರ್ಮಿತ ಬಾಂಬ್ ತಯಾರಿಸುತ್ತಿದ್ದ ವೇಳೆ ಬಾಂಬ್ ಸ್ಫೋಟಗೊಂಡು ಓರ್ವ ಮೃತಪಟ್ಟು, ಮತ್ತೊರ್ವ ಗಂಭೀರ ಗಾಯಗೊಂಡಿರುವ ಘಟನೆ ಕೇರಳದ ಕಣ್ಣೂರಿನ ಪನೂರಿನಲ್ಲಿ ನಡೆದಿದೆ.
ಖಾಲಿ ಪ್ರದೇಶದ ಜಾಗವೊಂದರಲ್ಲಿ ಬಾಂಬ್ ತಯಾರಿಸುವ ವೇಳೆ ಈ ಘಟನೆ ನಡೆದಿದೆ. ದುರ್ಘಟನೆ ಸಂಭವಿಸುತ್ತಿದ್ದಂತೆ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರೂ ಓರ್ವ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದು, ಮತ್ತೊರ್ವನ ಸ್ಥಿತಿ ಗಂಭೀರವಾಗಿದೆ. ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಕಣ್ಣೂರಿನ ಪೊಲೀಸ್ ಮೂಲಗಳ ಮಾಹಿತಿಯ ಪ್ರಕಾರ , ಈ ನಾಲ್ವರು ಯುವಕರು ಬೇರೆ ಬೇರೆ ಅಪರಾಧ ಚಟುವಟಕೆಯಲ್ಲಿ ಭಾಗಿಯಾಗಿದ್ದರು.ಈ ನಡುವೆ ಸ್ಫೋಟ ಪ್ರಕರಣ ರಾಜಕೀಯ ಬಣ್ಣ ಪಡೆದುಕೊಂಡಿದೆ.
ಘಟನೆಗೆ ಸಿಪಿಎಂ ಪಕ್ಷವೇ ಕಾರಣವೆಂದು ಕಾಂಗ್ರೆಸ್ ಮತ್ತು ಬಿಜೆಪಿ ಆರೋಪಿಸಿವೆ. ಸಿಪಿಎಂ ಬೆಂಬಲಿಗರಿಂದ ಬಾಂಬ್ ತಯಾರಿಸಲಾಗುತ್ತಿತ್ತು ಎಂದು ಕಾಂಗ್ರೆಸ್ ಆರೋಪಿಸಿದ್ರೆ, ಎಡ ಪಕ್ಷ ಬಾಂಬ್ ಬಳಸಿ ಭಯೋತ್ಪಾದನೆ ಮಾಡಲು ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಇನ್ನೊಂದೆಡೆ ಎಡಪಕ್ಷ ಶಾಂತಿ ಸ್ಥಾಪನೆಗೆ ಪ್ರಯತ್ನಿಸುತ್ತಿರುವಾಗ ವಿರೋಧಿಗಳು ರಾಜಕೀಯ ದುರುದ್ದೇಶದಿಂದ ಈ ರೀತಿಯ ಹೇಳಿಕೆಗಳನ್ನು ನೀಡಿ , ಅಪಪ್ರಚಾರ ಮಾಡುತ್ತಿದ್ದಾರೆ. ಈ ಮೂಲಕ ಜನರ ದಿಕ್ಕು ತಪ್ಪಿಸುವ ಕೆಲಸ ನಡೆಯುತ್ತಿದೆ’ ಎಂದು ಸಿಪಿಎಂ ತಿರುಗೇಟು ನೀಡಿದೆ.