ಸಾರಾಂಶ
ಪಹಲ್ಗಾಂ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ನಡೆಸಿದ ಆಪರೇಷನ್ ಸಿಂದೂರವು ದೇಶದ ಉಗ್ರವಾದದ ವಿರುದ್ಧ ಹೋರಾಟಕ್ಕೆ ಒಂದು ಐತಿಹಾಸಿಕ ಉದಾಹರಣೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ.
ನವದೆಹಲಿ: ಪಹಲ್ಗಾಂ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ನಡೆಸಿದ ಆಪರೇಷನ್ ಸಿಂದೂರವು ದೇಶದ ಉಗ್ರವಾದದ ವಿರುದ್ಧ ಹೋರಾಟಕ್ಕೆ ಒಂದು ಐತಿಹಾಸಿಕ ಉದಾಹರಣೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ.
79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಗುರುವಾರ ಸಂಜೆ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ‘ಆಪರೇಷನ್ ಸಿಂದೂರ ಜಾಗತಿಕವಾಗಿ ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಮುಖ್ಯ ಮೈಲಿಗಲ್ಲು. ಭಾರತದ ಸಶಸ್ತ್ರ ಪಡೆಗಳು ದೃಢ ನಿರ್ಧಾರದಿಂದ ಗಡಿಯಾಚೆಗಿನ ಭಯೋತ್ಪಾದಕ ನೆಲೆಗಳನ್ನು ನಾಶಪಡಿಸಿವೆ. ನನ್ನ ಪ್ರಕಾರ ಇದು ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಐತಿಹಾಸಿಕ ಉದಾಹರಣೆ’ ಎಂದರು.ಇದೇ ವೇಳೆ ಅವರು, ‘ಭಾರತ ಆಕ್ರಮಣ ಮಾಡಲು ಬಯಸುವುದಿಲ್ಲ ಎಂಬುದು ಜಗತ್ತು ಗೊತ್ತಾಗಿದೆ. ಇದರ ಜೊತೆಗೆ ನಮ್ಮ ನಾಗರಿಕರ ರಕ್ಷಣೆಗಾಗಿ ಪ್ರತೀಕಾರ ತೀರಿಸಿಕೊಳ್ಳಲು ಹಿಂಜರಿಯುವುದಿಲ್ಲ ಎಂಬ ನಮ್ಮ ನಿಲುವನ್ನು ಜಗತ್ತು ಗಮನಿಸಿದೆ’ ಎಂದರು.