ಸಾರಾಂಶ
‘ಉಗ್ರವಾದವು ಪಾಕಿಸ್ತಾನ ಪ್ರಾಯೋಜಿತ ಎಂಬುದು ಆಪರೇಷನ್ ಸಿಂದೂರದಿಂದ ಸಾಬೀತಾಗಿದೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ನವದೆಹಲಿ: ‘ಉಗ್ರವಾದವು ಪಾಕಿಸ್ತಾನ ಪ್ರಾಯೋಜಿತ ಎಂಬುದು ಆಪರೇಷನ್ ಸಿಂದೂರದಿಂದ ಸಾಬೀತಾಗಿದೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಗಡಿ ಭದ್ರತಾ ಪಡೆ(ಬಿಎಸ್‌ಎಫ್) ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಶಾ, ‘ಭಾರತೀಯ ಸೇನೆ ಆಪರೇಷನ್ ಸಿಂದೂರದ ಅಡಿಯಲ್ಲಿ ಪಾಕಿಸ್ತಾನದಲ್ಲಿದ್ದ 9 ಉಗ್ರ ನೆಲೆಗಳ ಮೇಲೆ ದಾಳಿ ಮಾಡಿ ಉಡಾಯಿಸಿದೆವು. ಈ ವೇಳೆ ಸೇನಾ ಕಟ್ಟಡಗಳ ಮೇಲೆ ದಾಳಿಯಾಗಿರಲಿಲ್ಲ.
ಆದರೆ ಇದಕ್ಕೆ ಪಾಕ್ ಸೇನೆ ಪ್ರತೀಕಾರ ತೀರಿಸಕೊಳ್ಳಲು ಮುಂದಾಯಿತು. ಈ ಮೂಲಕ, ಪಾಕಿಸ್ತಾನವೇ ಉಗ್ರ ಪ್ರಾಯೋಜಕ ಎಂಬುದು ಸಾಬೀತಾಗಿದೆ’ ಎಂದರು. ಇದೇ ವೇಳೆ, ‘ಪಾಕ್ ಸೇನೆ ನಮ್ಮ ನಾಗರಿಕರನ್ನು ಗುರಿಯಾಗಿಸಿ ದಾಳಿ ನಡೆಸಲು ಯತ್ನಿಸಿತು. ಆದರೆ ನಮ್ಮ ವಾಯು ರಕ್ಷಣಾ ವ್ಯವಸ್ಥೆ ಅದನ್ನು ವಿಫಲಗೊಳಿಸಿತು. ಬಳಿಕವಷ್ಟೇ ನಾವು ಅವರ ವಾಯುನೆಲೆಗಳ ಮೇಲೆ ದಾಳಿ ನಡೆಸಿದೆವು’ ಎಂದು ಹೇಳಿದರು.