ಛತ್ತೀಸ್‌ ಗಢದಲ್ಲಿ 22 ನಕ್ಸಲರ ಎನ್‌ಕೌಂಟರ್‌

| N/A | Published : May 08 2025, 12:34 AM IST / Updated: May 08 2025, 04:33 AM IST

ಸಾರಾಂಶ

ಛತ್ತೀಸ್‌ಗಢದಲ್ಲಿ ನಕ್ಸಲರ ವಿರುದ್ಧ ಕಾರ್ಯಾಚರಣೆ ಮುಂದುವರೆದಿದ್ದು, ಬುಧವಾರ ತೆಲಂಗಾಣದ ಗಡಿಯಲ್ಲಿರುವ ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ 22ಕ್ಕೂ ಹೆಚ್ಚು ನಕ್ಸಲರು ಭದ್ರತಾ ಪಡೆಗಳ ಗುಂಡಿಗೆ ಬಲಿಯಾಗಿದ್ದಾರೆ.

  ಬಿಜಾಪುರ: ಛತ್ತೀಸ್‌ಗಢದಲ್ಲಿ ನಕ್ಸಲರ ವಿರುದ್ಧ ಕಾರ್ಯಾಚರಣೆ ಮುಂದುವರೆದಿದ್ದು, ಬುಧವಾರ ತೆಲಂಗಾಣದ ಗಡಿಯಲ್ಲಿರುವ ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ 22ಕ್ಕೂ ಹೆಚ್ಚು ನಕ್ಸಲರು ಭದ್ರತಾ ಪಡೆಗಳ ಗುಂಡಿಗೆ ಬಲಿಯಾಗಿದ್ದಾರೆ.

ಅಂತರರಾಜ್ಯ ಗಡಿಯಲ್ಲಿರುವ ಕರ್ರೆಗುಟ್ಟ ಬೆಟ್ಟದ ಅರಣ್ಯದಲ್ಲಿ ಬುಧವಾರ ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ 22ಕ್ಕೂ ಹೆಚ್ಚು ನಕ್ಸಲರು ಭದ್ರತಾ ಸಿಬ್ಬಂದಿ ಗುಂಡಿಗೆ ಬಲಿಯಾಗಿದ್ದು , ಈ ಪ್ರದೇಶದಲ್ಲಿ ಮಾವೋವಾದಿಗಳ ವಿರುದ್ಧ ಕಾರ್ಯಾಚರಣೆ ಮುಂದುವರೆದಿದೆ. ಬಸ್ತಾರ್‌ ಪ್ರದೇಶದಲ್ಲಿ ಪ್ರಾರಂಭಿಸಲಾದ ಅಪರೇಷನ್ ಸಂಕಲ್ಪ ಹೆಸರಿನ ಅತಿದೊಡ್ಡ ಕಾರ್ಯಾಚರಣೆ ಇದಾಗಿದ್ದು, ನಕ್ಸಲ್‌ ನಿಗ್ರಹದ ವಿವಿಧ ಘಟಕಗಳಿಗೆ ಸೇರಿದ ಸುಮಾರು 24 ಸಾವಿರ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದರು.

 ಇನ್ನು ಈ ಭಾಗದಲ್ಲಿ ಏ.21ರಿಂದಲೇ ಸಿಬ್ಬಂದಿ ಮಾವೋವಾದಿಗಳ ವಿರುದ್ಧ ಕಾರ್ಯಾಚರಣೆ ಪ್ರಾರಂಭಿಸಿದ್ದರು. ಈ ಮೂಲಕ ಇದುವರೆಗೆ ರಾಜ್ಯದಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಸಾವನ್ನಪ್ಪಿದ ನಕ್ಸಲರ ಸಂಖ್ಯೆ 168ಕ್ಕೇರಿಕೆಯಾಗಿದೆ.