ಸದ್ಯಕ್ಕೆ ರಾಮಮಂದಿರಕ್ಕೆ ಬರಬೇಡಿ: ಟ್ರಸ್ಟ್ಪ್ರಯಾಗ್ರಾಜ್ನಲ್ಲಿ ಕುಂಭಮೇಳ ನಡೆಯುತ್ತಿರುವುದರಿಂದ ಅಯೋಧ್ಯೆಯ ರಾಮಮಂದಿರಕ್ಕೆ ಕೂಡಾ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದು, ಅವರಿಗೆ ಸುಲಭ ದರ್ಶನ ವ್ಯವಸ್ಥೆ ಕಲ್ಪಿಸಲು ಸ್ಥಳೀಯರಿಗೆ 15-20 ದಿನಗಳ ಕಾಲ ರಾಮಮಂದಿರಕ್ಕೆ ಭೇಟಿ ನೀಡುವುದನ್ನು ಮುಂದೂಡಿಕೆ ಮಾಡಿ ಎಂದು ರಾಮ ಜನ್ಮಭೂಮಿ ಟ್ರಸ್ಟ್ ಸಲಹೆ ನೀಡಿದೆ.