ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಮುಂದುವರಿದಿದೆ. ಬಾಂಗ್ಲಾದ ದಿನಜಾಪುರದಲ್ಲಿ ಪ್ರಭಾವಿ ಹಿಂದೂ ನಾಯಕ ಭಾವೇಶ್ ಚಂದ್ರ ರಾಯ್ (58) ಅವರನ್ನು ಅಪಹರಿಸಿ ಭೀಕರವಾಗಿ ಗುರುವಾರ ಹತ್ಯೆ ಮಾಡಿದ ಘಟನೆ ಬಗ್ಗೆ ಭಾರತ ಸರ್ಕಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶೇ.245ರಷ್ಟು ಭಾರೀ ತೆರಿಗೆ ಹೇರಿದ ಬೆನ್ನಲ್ಲೇ ಚೀನಾ ಇದೀಗ ಭಾರತದತ್ತ ಸ್ನೇಹದ ಹಸ್ತ ಚಾಚಿದೆ. ಭಾರತದ ಪ್ರೀಮಿಯಂ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳಲು ತಾನು ಸಿದ್ಧ ಎಂದು ಚೀನಾ ಘೋಷಿಸಿದೆ.
ಸದಾ ವಿವಾದಿತ ಹೇಳಿಕೆಗಳ ಮೂಲಕ ಸುದ್ದಿಯಲ್ಲಿರುವ ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್ ಇದೀಗ ಬ್ರಾಹ್ಮಣ ಸಮುದಾಯದ ಬಗ್ಗೆ ಅವಹೇಳನಕಾರಿ ಮಾತುಗಳನ್ನು ಆಡಿದ್ದಾರೆ
ಮಾತುಕತೆಯಲ್ಲಿ ಪ್ರಗತಿ ಆಗದೇ ಹೋದಲ್ಲಿ ರಷ್ಯಾ- ಉಕ್ರೇನ್ ಸಂಧಾನ ಪ್ರಕ್ರಿಯೆಯಿಂದ ಹಿಂದೆ ಸರಿಯುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ಬೆನ್ನಲ್ಲೇ, ಉಭಯ ದೇಶಗಳು ಶನಿವಾರ ಪರಸ್ಪರ ಕೈದಿಗಳ ವಿನಿಮಯ ಮಾಡಿಕೊಂಡಿವೆ
‘ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಆಪ್ತ ಕಾರ್ಯದರ್ಶಿಯಂತೆ ಇದ್ದರು. ತಮ್ಮ ಸರ್ಕಾರ ಮಾಡಿದ ಒಳ್ಳೆಯ ಕೆಲಸಗಳ ಶ್ರೇಯವನ್ನೂ ಅವರು ಪಡೆಯುತ್ತಿರಲಿಲ್ಲ’ ಎಂದು ಪ್ರಧಾನಿಗಳ ಕಚೇರಿ ಬಗ್ಗೆ ಜೆಎನ್ಯುನ ಅಧ್ಯಾಪಕರೊಬ್ಬರು ಬರೆದ ಪುಸ್ತಕದಲ್ಲಿ ದಾಖಲಿಸಲಾಗಿದೆ.