ಭಾರತ- ಪಾಕ್ ನಡುವಿನ ಉದ್ವಿಗ್ನ ಪರಿಸ್ಥಿತಿಯ ನಡುವೆಯೇ ಭಾರತ ಬುಧವಾರ ಅರಬ್ಬೀ ಸಮುದ್ರ ತೀರದಲ್ಲಿ ತನ್ನ ವಾಯುರಕ್ಷಣಾ ಸಾಮರ್ಥ್ಯವನ್ನು ಪ್ರದರ್ಶಿಸಿದೆ.
25 ಭಾರತೀಯರು ಹಾಗೂ ಓರ್ವ ನೇಪಾಳಿ ಸೇರಿ 26 ಜನರ ಬಲಿ ಪಡೆದ ಜಮ್ಮು-ಕಾಶ್ಮೀರದ ಪಹಲ್ಗಾಂ ಉಗ್ರ ದಾಳಿಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಭಾರತವು ಪಾಕಿಸ್ತಾನದ ವಿರುದ್ಧ ಮೊದಲ ಪ್ರತೀಕಾರ ಕ್ರಮ ಕೈಗೊಂಡಿದೆ. ಇದರ ಭಾಗವಾಗಿ 6 ‘ರಾಜತಾಂತ್ರಿಕ ನಿರ್ಬಂಧ’ಗಳನ್ನು ಹೇರಿದೆ.
ಪ್ರವಾಸಿಗರನ್ನು ಕೈಬೀಸಿ ತನ್ನತ್ತ ಕರೆಯುತ್ತಿದ್ದ ಜಮ್ಮು- ಕಾಶ್ಮೀರದಲ್ಲಿ ಮತ್ತೆ ಉಗ್ರರ ಬಂದೂಕು ಸದ್ದು ಮಾಡಿದ್ದು, 26 ಪ್ರವಾಸಿಗರನ್ನು ಬಲಿ ಪಡೆದಿದೆ. ಇದರ ವಿರುದ್ಧ ದೇಶಾದ್ಯಂತ ಜನಾಕ್ರೋಶ ಭುಗಿಲೆದ್ದಿದೆ. ಪಾಕ್ ಬೆಂಬಲಿತ ಉಗ್ರರ ವಿರುದ್ಧ ವಿದೇಶಗಳಲ್ಲೂ ಕೂಗು ಎದ್ದಿದೆ.
ಕಾಶ್ಮೀರದ ಪಹಲ್ಗಾಂನಲ್ಲಿ ಉಗ್ರರ ದಾಳಿಗೆ ಬಲಿಯಾಗಿರುವ ಕನ್ನಡಿಗರ ಪಾರ್ಥಿವ ಶರೀರ ಬುಧವಾರ ತಡರಾತ್ರಿ ರಾಜ್ಯಕ್ಕೆ .
ಪಹಲ್ಗಾಮ್ ಉಗ್ರ ದಾಳಿ ಬಳಿಕ ಜಮ್ಮು ಮತ್ತು ಕಾಶ್ಮೀರದಿಂದ ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಕಣಿವೆ ವಾಪಸ್ ಹೋಗುತ್ತಿದ್ದು, ಇದರಿಂದ ವಿಮಾನ ನಿಲ್ದಾಣದಲ್ಲಿ ನೂಕು-ನುಗ್ಗಲಿನ ಸ್ಥಿತಿ ನಿರ್ಮಾಣವಾಗಿದೆ.