ಕಡಬದ ಮಸೀದಿಯಲ್ಲಿ ಜೈಶ್ರೀರಾಮ್ ಎಂದು ಘೋಷಣೆ ಕೂಗಿದವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಕೇಸ್ ರದ್ದುಪಡಿಸಿದ್ದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ಆರಂಭಿಸಿರುವ ಸುಪ್ರೀಂ ಕೋರ್ಟ್, ‘ಜೈ ಶ್ರೀರಾಮ್ ಎನ್ನುವುದು ಅಪರಾಧ ಹೇಗಾದೀತು?’ ಎಂದು ಪ್ರಶ್ನಿಸಿದೆ.
ಗಾಜಾ ಪಟ್ಟಿ ಪ್ರದೇಶದಲ್ಲಿನ ಇಸ್ರೇಲ್ ದಾಳಿ ಬಳಿಕ ಸಂಕಷ್ಟದಲ್ಲಿರುವ ಪ್ಯಾಲೆಸ್ತೀನಿಯರ ಪರ ಮತ್ತೊಮ್ಮೆ ಧ್ವನಿ ಎತ್ತಿರುವ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ವಾದ್ರಾ, ಪ್ಯಾಲೆಸ್ತೀನ್ ಹೆಸರು, ಲಾಂಛನ ಒಳಗೊಂಡ ಬ್ಯಾಗ್ ಅನ್ನು ಸೋಮವಾರ ಸಂಸತ್ತಿಗೆ ತಂದು ವಿವಾದ ಸೃಷ್ಟಿಸಿದ್ದಾರೆ.
ನೆಹರು ಬರೆದಿದ್ದ ಪತ್ರಗಳಲ್ಲಿನ ಅಂಶಗಳನ್ನು ಪ್ರಧಾನಿ ನರೇಂದ್ರ ಮೋದಿ ತಿರುಚಿದ್ದಾರೆ ಎಂದು ಆರೋಪಿಸಿರುವ ರಾಜ್ಯಸಭೆಯ ವಿಪಕ್ಷ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ಈ ವಿಷಯದಲ್ಲಿ ದೇಶವನ್ನು ದಿಕ್ಕು ತಪ್ಪಿಸಿದ್ದಕ್ಕಾಗಿ ಮೋದಿ ಕ್ಷಮೆ ಯಾಚಿಸಬೇಕು’ ಎಂದು ಒತ್ತಾಯಿಸಿದ್ದಾರೆ.
ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿನಲ್ಲಿ ಮಂಡಿಸುವ ಸಾಧ್ಯತೆಯಿದೆ. ಮಂಡನೆಯ ಬಳಿಕ ಉಭಯ ಸದನಗಳ ಜಂಟಿ ಸಮಿತಿ ಪರಾಮರ್ಶೆಗೆ ಈ ವಿಧೇಯಕವನ್ನು ಹಸ್ತಾಂತರಿಸುವ ನಿರೀಕ್ಷೆ ಇದೆ.
ದೆಹಲಿಯಲ್ಲಿ ಮುಂದಿನ ವರ್ಷ ಫೆಬ್ರವರಿಯಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ಸಿಎಂ ಅಭ್ಯರ್ಥಿ ಯಾರಾಗಬೇಕು ಎಂಬ ತಲಾಶೆ ಆರಂಭಿಸಿದ್ದು, ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೆಸರು ಮುಂಚೂಣಿಯಲ್ಲಿದೆ ಎಂಬ ಗುಸುಗುಸು ಕೇಳಿಬರುತ್ತಿದೆ.