ನ್ಯಾ। ಯಾದವ್ ವಿವಾದಿತ ಹೇಳಿಕೆ: ವಿವರ ಕೇಳಿದ ಸುಪ್ರೀಂ ‘ಹಿಂದುಸ್ತಾನದಲ್ಲಿ ಬಹುಸಂಖ್ಯಾತರ ಇಚ್ಛೆಯಂತೆ ಕೆಲಸ ನಡೆಯುತ್ತದೆ’ ಎಂದು ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿರುವ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾ। ಶೇಖರ್ ಯಾದವ್ ಅವರ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿದ್ದು, ವಿವರಣೆ ನೀಡುವಂತೆ ಅಲಹಾಬಾದ್ ಹೈಕೋರ್ಟ್ಗೆ ಸೂಚನೆ ನೀಡಿದೆ.